ಬೆಂಗಳೂರು : ದೇವನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ದೊಡ್ಡಬಳ್ಳಾಪುರ ಟೌನ್‌ಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:17.06.2025 ರಂದು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:30.05.2025 ರಂದು ಮಧ್ಯಾಹ್ನ ದೇವನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಕೋಡಿ ಮಂಚೇನಹಳ್ಳಿಯ ವನಸಿರಿ ವೃಕೋದ್ಯಾನದ ಗೇಟ್ ಮುಂದೆ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ, ವನಸಿರಿ ವೃಕೋದ್ಯಾನದ ಓಳಗೆ ಹೋಗಿ ವಾಪಸ್ ಒಂದು ಗಂಟೆ ಬಿಟ್ಟು ಬಂದು ನೋಡಲಾಗಿ, ಪಿರ್ಯಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:14/08/2025 ರಂದು ಮಾರತ್ತಹಳ್ಳಿಯ ಶ್ರೀರಾಮ ದೇವಸ್ಥಾನದ ಬಳಿ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚನ್ನಪಟ್ಟಣ. ರಾಮನಗರ ಜಿಲ್ಲೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:14/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ. 07 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಕಳವು ಮಾಡಿರುವ ದ್ವಿ-ಚಕ್ರ ವಾಹನಗಳನ್ನು ದೊಡ್ಡಬಳ್ಳಾಪುರ ಜಿಲ್ಲೆಯ ವಿಶ್ವನಾಥಪುರ ಪೊಲೀಸ್ ಠಾಣಾ ಸರಹದ್ದಿನ ಖಾಸಗಿ ಕಂಪನಿಯೊಂದರ ಪಕ್ಕದ ರಸ್ತೆಯ ಖಾಲಿ ಜಾಗದಲ್ಲಿ ಹಾಗೂ ಚನ್ನರಾಯಪಟ್ಟಣದ ಇಂಡಸ್ಟ್ರಿಯಲ್ ಏರಿಯಾದ ಅಕ್ಕ-ಪಕ್ಕದ ರಸ್ತೆಯ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯು ನೀಡಿದ ಮಾಹಿತಿ ಮೇರೆಗೆ ದಿನಾಂಕ:19/08/2025 ರಿಂದ 20/08/2025 ರ ಅವಧಿಯಲ್ಲಿ ಒಟ್ಟು 35 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ಬಂಧನದಿಂದ, ಒಟ್ಟು 36 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 16,00,000/-(ಹದಿನಾರು ಲಕ್ಷ ರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ 1) ಬಾಗೆಪಲ್ಲಿ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 2) ಇಂದಿರಾನಗರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 3) ಚಿತ್ರದುರ್ಗ ಎಕ್ಸಷನ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 4) ಚೆನ್ನಪಟ್ಟಣ ಟೌನ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 5) ಬ್ಯಾಟರಾಯನಪುರ ಪೊಲೀಸ್ ಠಾಣೆಯ- ದ್ವಿ-ಚಕ್ರ ವಾಹನ ಕಳವು ಪ್ರಕರಣ 6) ಮಾದನಾಯಕಹಳ್ಳಿ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 7) ದಾಬಸ್ ಪೇಟೆ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 8) ಹೊಸಕೋಟೆ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 9) ಆರ್.ಎಂಸಿ ಯಾರ್ಡ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 10) ಕಾಡುಗುಡಿ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 11) ಗೌರಿಬಿದನೂರು ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು 12) ಸರ್ಜಾಪುರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ 13) ವೈಟ್ ಪೀಲ್ಡ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 14) ಕೊಡಿಗೆಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 15) ನೆಲಮಂಗಲ ಟೌನ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 16) ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 17 ದ್ವಿ-ಚಕ್ರ ವಾಹನಗಳ ಕಳವು ಪ್ರಕರಣ ಪತ್ತೆಯಗಿರುತ್ತದೆ. ಉಳಿದ 19 ದ್ವಿ-ಚಕ್ರ ವಾಹನಗಳ ವಾರಸುದಾರರ ಪತ್ತೆಕಾರ್ಯ ಮುಂದುವರೆದಿದೆ.
ದಿನಾಂಕ:20/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರು,ವಿ.ಜೆ.ಸುಜೀತ್, ಐಪಿಎಸ್ ರವರು, ಸಹಾಯಕ ಪೊಲೀಸ್ ಆಯುಕ್ತರು, ದೇವನಹಳ್ಳಿ ಉಪ ವಿಭಾಗ ನವೀನ್ ಕುಮಾರ್ ರವರ ಮಾರ್ಗದರ್ಶನದಲ್ಲಿ, ದೇವನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಾಕೇಶ್.ಸಿ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.