ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ 4ಲಕ್ಷ ಮೌಲ್ಯದ 4 ಕೆಜಿ 100 ಗ್ರಾಂ ಗಾಂಜಾ ವಶ

ದಿನಾಂಕ:28/08/2025 ರಂದು ಜಾಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಭಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಠಾಣಾ ಸರಹದ್ದಿನ ಹೆಚ್ ಎಂಟಿ ಫ್ಯಾಕ್ಟರಿ ರಸ್ತೆಯ ಕಾಳಿಂಗರಾವ್ ಸರ್ಕಲ್ ಬಳಿ ಇಬ್ಬರು ವ್ಯಕ್ತಿಗಳು ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ.

ಈ ಮಾಹಿತಿಯನ್ನಾಧರಿಸಿ, ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ, ನಂತರ ಬಾತ್ಮಿದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಒರಿಸ್ಸಾ ರಾಜ್ಯದ ಪುಟ್ಟಂಗಿಯಲ್ಲಿರುವ ಅಪರಿಚಿತ ವ್ಯಕ್ತಿಗಳ ಮೂಲಕ ಗಾಂಜಾವನ್ನು ಕಡಿಮೆ ಬಲೆಗೆ ಖರೀದಿಸಿ, ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದಾಗಿ ತಪ್ಪೋಪ್ಪಿಕೊಂಡಿರುತ್ತಾರೆ. ಆರೋಪಿತರ ವಶದಲ್ಲಿದ್ದ 4 ಕೆಜಿ 100 ಗ್ರಾಂ ಗಾಂಜಾ ಒಂದು ತೂಕದ ಯಂತ್ರವನ್ನು ವಶಕ್ಕೆ ಪಡೆದುಕೊಂಡಿರುತ್ತದೆ. ಇದರ ಮೌಲ್ಯ ₹4,00,000/-(ನಾಲ್ಕು ಲಕ್ಷ ರೂಪಾಯಿ).

ದಿನಾಂಕ:29/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈ ಕಾರ್ಯಾಚರಣೆಯನ್ನು ಮಾನ್ಯ ಉಪ ಪೊಲೀಸ್ ಆಯುಕ್ತರು ಶ್ರೀ. ಬಾಬಾ ಸಾಹೇಬ ನೇಮಗೌಡ ರವರ ಮಾರ್ಗದರ್ಶನದಲ್ಲಿ, ಸಹಾಯಕ ಪೊಲೀಸ್ ಆಯುಕ್ತರು ಶ್ರೀಮತಿ ಮೇರಿ ಶೈಲಜಾ ರವರ ನೇತೃತ್ವದಲ್ಲಿ ಜಾಲಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಸಿದ್ದೇಗೌಡ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ..

ವರದಿ : ಮುಬಾರಕ್

error: Content is protected !!