ಸಿದ್ದಾಪುರ ಪೊಲೀಸ್ ಠಾಣಾ ಸರಹದ್ದಿನ ಜಯನಗರ 1ನೇ ಬ್ಲಾಕ್, ಮೌಂಟೆನ್ ಸ್ಪೀಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:19/08/2025 ರಂದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ಅವರ ಜಯನಗರ 2ನೇ ಬ್ಲಾಕ್‌ನಲ್ಲಿರುವ ಅಂಗಡಿಗೆ ದಿನಾಂಕ:18/08/2025 ರಂದು ರಾತ್ರಿ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದು, ಮರುದಿನ ಬೆಳಿಗ್ಗೆ ಆಂಗಡಿಯ ಬಾಗಿಲು ತೆಗೆಯಲು ಹೋದಾಗ ಅಂಗಡಿಯ ಬಾಗಿಲು ಅರ್ಧ ತೆಗೆದಿದ್ದು, ಅಂಗಡಿಯ ಬಾಗಿಲನ್ನು ಎತ್ತಿ ಒಳಗೆ ಹೋಗಿ ನೋಡಲಾಗಿ ಡಿ.ವಿ.ಆರ್ ವೈರ್ ಕಟ್ ಆಗಿರುತ್ತದೆ. ಡಿ.ವಿ.ಆರ್ ಕಂಡುಬಂದಿರುವುದಿಲ್ಲ. ಸುಮಾರು * 4,26,608/- ಮೌಲ್ಯದ ಫಿನೋಲೆಕ್ಸ್, ಆಂಕರ್, ಹಾವೇಲ್ಸ್, ಪಾಲಿಕ್ಯಾಬ್, ಸುಧಾರಕ್ ಎಂಬ ಕಂಪನಿಯ ಸುಮಾರು 80 ರಿಂದ 90 ಕಾಯಿಲ್‌ಗಳನ್ನು ಯಾರೋ ಅಪರಿಚಿತರು ಕಳವು ಮಾಡಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:09/09/2025 ರಂದು ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿಯ ಅವರ ವಾಸದ ಮನೆಯಿಂದ ಕೃತ್ಯಕ್ಕೆ ಬಳಸಿದ್ದ ದ್ವಿ-ಚಕ್ರ ವಾಹನ ಸಮೇತ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಇಬ್ಬರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:10/09/2025 ರಂದು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 05 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಆರೋಪಿಗಳು “ಸ್ವಿ” ಆರ್ಡ‌್ರಗಳನ್ನು ಡೆಲವರಿ ಮಾಡುವ ನೆಪದಲ್ಲಿ ಅಂಗಡಿಗಳನ್ನು ಗುರುತಿಸಿ ರಾತ್ರಿ ವೇಳೆಯಲ್ಲಿ ಕಟ್ಟರ್, ಕಬ್ಬಿಣದ ರಾಡ್ ನಿಂದ ಬೀಗ ಮುರಿದು ಬೆಲೆ ಬಾಳುವ ವೈರ್‌ಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿರುತ್ತಾರೆ. ಕಳವು ಮಾಡಿದ ಮಾಡಿದ ವಿವಿಧ ಕಂಪನಿಯ ವೈರ್‌ಗಳನ್ನು ತಮ್ಮ ವಾಸದ ಮನೆಯಲ್ಲಿ ಇಟ್ಟಿರುವುದಾಗಿ ಹಾಗೂ ದ್ವಿ-ಚಕ್ರ ವಾಹನದ ಡಿಕ್ಕಿಯಲ್ಲಿ ಕಟ್ಟರ್, ಕಬ್ಬಿಣದ ರಾಡ್ ಅನ್ನು ಇಟ್ಟಿರುವುದಾಗಿ ತಿಳಿಸಿದ್ದು, ದಿನಾಂಕ:12/09/2025 ರಂದು 72 ವಿವಿಧ ಕಂಪನಿಯ ವೈರ್ ಕಾಯಿಲ್ಸ್‌ಗಳನ್ನು ಹಾಗೂ ಕಟ್ಟರ್, ಕಬ್ಬಿಣದ ರಾಡ್ ಅನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಗಳ ವಶದಿಂದ ವಿವಿಧ ಕಂಪನಿಯ ವೈರ್ ಕಾಯಿಲ್ಸ್, ಕಟ್ಟರ್, ಕಬ್ಬಿಣದ ರಾಡ್ ಮತ್ತು 01 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ ₹5,00,000/-(ಐದು ಲಕ್ಷ ರೂಪಾಯಿ).
03:13/09/2025 0 ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ.ಲೊಕೇಶ್.ಬಿ ಜಗಲಾಸರ್, ಐ.ಪಿ.ಎಸ್ ಮತ್ತು ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾರಾಯಣಸ್ವಾಮಿ.ವಿ ರವರ ಮಾರ್ಗದರ್ಶನದಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಮೊಹನ್.ಡಿ.ಪಟೇಲ್ ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ : ಮುಬಾರಕ್ ಬೆಂಗಳೂರು