ಬೆಂಗಳೂರು (ಪೀಣ್ಯ) : ಪೊಲೀಸ್ ಠಾಣೆಯಲ್ಲಿ ದಿನಾಂಕ:18/08/2025 ರಂದು ವಿಜಯನಗರ ಜಿಲ್ಲೆಯ ವಾಸಿಯಾದ ಪಿರಾದುದಾರರು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ದಿನಾಂಕ:14/08/2025 ರಂದು ರಾತ್ರಿ ವಿಜಯನಗರಕ್ಕೆ ಹೋಗಲು ಪೀಣ್ಯ ಪೊಲೀಸ್ ಠಾಣಾ ಸರಹದ್ದಿನ ಜಾಲಹಳ್ಳಿ ಬಸ್ ನಿಲ್ದಾಣದಲ್ಲಿ ನಿಂತಿರುವಾಗ, ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಹಿರಾದುದಾರರನ್ನು ವಿಜಯನಗರಕ್ಕೆ ಡ್ರಾಪ್ ನೀಡುವುದಾಗಿ ಕಾರಿಗೆ ಹತ್ತಿಸಿಕೊಂಡು, ನಂತರ ನೆಲಮಂಗಲದ ದಾಬಾಸ್‌ಪೇಟೆ ಬಳಿ ಪಿರ್ಯಾದುದಾರರಿಗೆ ಪಿಸ್ತೂಲ್ ತೋರಿಸಿ, ಬೆದರಿಸಿ, ಪಿಯಾದುದಾರರ ಬಳಿ ಇದ್ದ ₹ 5000/- ನಗದು ಹಾಗೂ ₹75,000/- ಬೆಲೆ ಬಾಳುವ 2 ಮೊಬೈಲ್ ಪೋನ್‌ಗಳನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿರುತ್ತದೆ.
ರೂಮ್ ವೊಂದರಲ್ಲಿ ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ. ದಿನಾಂಕ:25/08/2025 ರಂದು ಮಾರತ್ ಹಳ್ಳಿಯ ದೊಡ್ಡನಕ್ಕುಂದಿಯಲ್ಲಿರುವ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ಹಾಗೂ ಈ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಯಿತು. ಮೂವರು ಆರೋಪಿಗಳಿಂದ ಒಟ್ಟು 03 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಕಾರನ್ನು ಪರಿಶೀಲಿಸಿದಾಗ ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ ಹಾಗೂ ಪಿರ್ಯಾದುದಾರರಿಗೆ ಸೇರಿದ 02 ಮೊಬೈಲ್ ಫೋನ್‌ಗಳು ಪತ್ತೆಯಾಗಿರುತ್ತದೆ. ಇವುಗಳನ್ನೂ ಸಹ ವಶಪಡಡಿಸಿಕೊಳ್ಳಲಾಯಿತು. ವಶಕ್ಕೆ ಪಡೆದ ಮೂವರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಸುಲಿಗೆ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ.
ದಿನಾಂಕ:26/08/2025 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರ್ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ದಿನಾಂಕ:28/08/2025 ರಂದು ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಹಾಗೂ ತನಿಖೆಯನ್ನು ಮುಂದುವರೆಸಿ, ದಿನಾಂಕ:04/09/2025 ರಂದು ನ್ಯಾಯಾಂಗ ಬಂಧನದಲ್ಲಿದ್ದ ಉಳಿದ ಆರೋಪಿಗಳಿಬ್ಬರನ್ನು 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು. ಈ ಮೂವರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ ಕೃತ್ಯಕ್ಕೆ ಬಳಿಸಿದ್ದ ಪಿಸ್ತೂಲ್‌ನ್ನು ಇವರ ಜೊತೆ ಈ ಹಿಂದೆ ಜೈಲಿನಲ್ಲಿದ್ದ ಮತ್ತೋರ್ವ ವ್ಯಕ್ತಿಯು ನೀಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:06,09/2025 ರಂದು ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರ್ ಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕೃತ್ಯಕ್ಕೆ ಪಿಸ್ತೂಲ್‌ನ್ನು ನೀಡಿದ್ದ ಆರೋಪಿಯನ್ನು ದಿನಾಂಕ:10/09/2025 ರಂದು ಬಿಜಾಪುರ ಜಿಲ್ಲೆಯ ಹೊರ್ತಿ ಗ್ರಾಮದಿಂದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ಈ ಪ್ರಕರಣದ ನಾಲ್ಕು ಆರೋಪಿಗಳ ಬಂಧನದಿಂದ ಪಿರ್ಯಾದುದಾರರಿಗೆ ಸೇರಿದ 2 ಮೊಬೈಲ್ ಪೋನ್‌ಗಳು ಹಾಗೂ ಆರೋಪಿಗಳ ವಶದಲ್ಲಿದ್ದ 3 ಮೊಬೈಲ್ ಪೋನ್‌ಗಳು, ಕೃತ್ಯಕ್ಕೆ ಬಳಸಿದ ಪಿಸ್ತೂಲ್ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ ₹ 4,00,000/- (ನಾಲ್ಕು ಲಕ್ಷ ರೂಪಾಯಿ).
ದಿನಾಂಕ:11/09/2025 ರಂದು ಉಳಿದ ಇಬ್ಬರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರ್ ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು, ವಾಯುವ್ಯ ವಿಭಾಗ, ನಾಗೇಶ್ ಡಿ ಎಲ್. ಐ.ಪಿ.ಎಸ್ ರವರ ನಿರ್ದೇಶನದಲ್ಲಿ ಹಾಗೂ ಪೀಣ್ಯ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಎಂ ಎಸ್ ಅಶೋಕ್ ರವರ ಮಾರ್ಗದರ್ಶನದಲ್ಲಿ ಮತ್ತು ಪೀಣ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅನಿಲ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಯವರು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ : ಮುಬಾರಕ್ ಬೆಂಗಳೂರು