ಎಸ್.ಎಲ್.ಬೈರಪ್ಪನವರ ನಿಧನಕ್ಕೆ ಪಾಲಾಮೂರ್ ಸಂತಾಪ

ಕನ್ನಡ ಸಾಹಿತ್ಯದ ಸಂತ ಎಸ್.ಎಲ್.ಬೈರಪ್ಪ* ನವರನ್ನು ಕಳೆದುಕೊಂಡ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಪಾಲಾಮೂರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಅವರನ್ಬು 1999 ರಲ್ಲಿ ಕನಕಪೂರದಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿ ಸಮೀಪದಿಂದ ನೋಡಿದ್ದೆ. ಅವರ ಮಂದ್ರ, ಆವರಣ, ವಂಶವೃಕ್ಷ, ಪರ್ವ, ದಾಟು, ಕಾವಲು, ವಂಶವೃಕ್ಷ, ತಬ್ಬಲಿ ನೀನಾದೆ ಮಗನೆ ಮುಂತಾದ ಕಾದಂಬರಿಗಳನ್ನು ಓದಿದ್ದೇನೆ‌ ಈಗಲೂ ನನ್ನ ಮನೆಯ ಪುಸ್ತಕ ಬಂಡಾರದಲ್ಲಿ ಇವೆ. ಕನ್ನಡ ಸಾಹಿತ್ಯ, ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ಹಿರಿಯ ಚೇತನಕ್ಕೆ ಸಾವಿರದ ಶರಣು ಎಂದು ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಪಾಲಾಮೂರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ವರದಿ : ರಾಜೇಂದ್ರ ಪ್ರಸಾದ್

error: Content is protected !!