ದೇವಸ್ಥಾನಗಳ ಬೀಗ ಮುರಿದು, ಚಿನ್ನಾ-ಬೆಳ್ಳಿಯ ಆಭರಣಗಳನ್ನು ಹಾಗೂ ಕಾಣಿಕೆ ಹುಂಡಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ

ಬೆಳ್ಳಿಯ ಆಭರಣಗಳು, ಹುಂಡಿಯ ಹಣ ಮತ್ತು

01 ದ್ವಿ-ಚಕ್ರ ವಾಹನದ ವಶ. ಮೌಲ್ಯ ₹ 01 ಲಕ್ಷ.

ಬೆಂಗಳೂರು (ಬನಶಂಕರಿ) : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿರುವ ಪಿರ್ಯಾದುದಾರರು ವಿನಾಯಕ ದೇವಸ್ಥಾನದ ಮುಖ್ಯಸ್ಥರಾಗಿದ್ದು, ದಿನಾಂಕ:29/08/2025 ರಂದು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:28/08/2025 ರಂದು ದೇವಸ್ಥಾನದ ಬಾಗಿಲನ್ನು ಹಾಕಿಕೊಂಡು ಹೋಗಿದ್ದು, ಮಾರನೇ ದಿನ ಬೆಳಿಗ್ಗೆ ಬಂದು ನೋಡಲಾಗಿ, ದೇವಸ್ಥಾನದ ಬಾಗಿಲ ಬೀಗವನ್ನು ಮುರಿದು ದೇವರ ಮೂರ್ತಿಗೆ ತೊಡಿಸಿದ್ದ ಬೆಳ್ಳಿ ಆಭರಣಗಳು ಹಾಗೂ ಹುಂಡಿ ಹಣವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:11/09/2025 ರಂದು ಸಾರಕ್ಕಿ ಸಿಂಗ್ನಲ್ ಬಳಿ ಇಬ್ಬರು ವ್ಯಕ್ತಿಗಳನ್ನು ಒಂದು ದ್ವಿ-ಚಕ್ರ ವಾಹನದ ಹಾಗೂ ಪಂಚ ಲೋಹದ ವಿಗ್ರಹದ ಸಮೇತ ವಶಪಡಿಸಿಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳಿಬ್ಬರನ್ನು ವಿಚಾರಣೆಗೊಳಪಡಿಸಿಲಾಗಿ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾರೆ. ಹಾಗೂ ಕಳವು ಮಾಡಿದ ಬೆಳ್ಳಿಯ ವಸ್ತುಗಳನ್ನು ಜೆ.ಪಿ ನಗರದಲ್ಲಿರುವ ಜ್ಯೂವೆಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ.

00:12/09/2025 ಜೆ.ಪಿ ನಗರದ ಜ್ಯೂವೆಲರಿ ಅಂಗಡಿಯೊಂದರಿಂದ ಒಟ್ಟು 744 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ ₹1,00,000/-(ಒಂದು ಲಕ್ಷ ರೂಪಾಯಿ).

ಅದೇ ದಿನ ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಆರೋಪಿಗಳಿಬ್ಬರ ಬಂಧನದಿಂದ ಬನಶಂಕರಿ ಪೊಲೀಸ್ ಠಾಣೆಯ-01 ದೇವಸ್ಥಾನದಲ್ಲಿ ಕಳವು ಪ್ರಕರಣ ಮತ್ತು ಸದುಗುಂಟೆಪಾಳ್ಯ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 02 ಪ್ರಕರಣಗಳು ಪತ್ತೆಯಾಗಿರುತ್ತದೆ.

ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲೋಕೇಶ ಭರಮಪ್ಪಜಗಲಾಸರ್‌, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ವಿ ನಾರಾಯಣಸ್ವಾಮಿ ರವರ ಉಸ್ತುವಾರಿಯಲ್ಲಿ, ಬನಶಂಕರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೋಟ್ರೇಶಿ ಬಿ.ಎಮ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ : ಮುಬಾರಕ್ ಬೆಂಗಳೂರು

error: Content is protected !!