ಎಪಿಎಂಸಿ (APMC)ಯಲ್ಲಿ ಜೈಕಿಸಾನ್‌ ಮಾರುಕಟ್ಟೆ ವರ್ತಕರ ಸಮಸ್ಯೆಗಳ ಕುರಿತು ಸಭೆ

ಬೆಳಗಾವಿ : ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿಯ ಎಪಿಎಂಸಿ (APMC)ಯಲ್ಲಿ ಜೈಕಿಸಾನ್‌ ಮಾರುಕಟ್ಟೆ ವರ್ತಕರ ಸಮಸ್ಯೆಗಳ ಕುರಿತು ಸಭೆ ನಡೆಸಿ, ಶಾಶ್ವತ ಪರಿಹಾರ ನೀಡುವ ದಿಕ್ಕಿನಲ್ಲಿ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದ್ದೇನೆ. ಇನ್ನೊಂದು ವಾರದ ಒಳಗಾಗಿ ಈ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬ ಭರವಸೆ ನೀಡಿದರು.

ಜೈಕಿಸಾನ್‌ ಮಾರುಕಟ್ಟೆಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಆದಾಗ್ಯೂ, ಅಲ್ಲಿ ವ್ಯಾಪಾರ ನಡೆಸುತ್ತಿರುವ ವರ್ತಕರು ಯಾವುದೇ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ನಾನು ಇಂದೇ ಸರ್ಕಾರಿ ಎಪಿಎಂಸಿಯಲ್ಲಿನ ವ್ಯವಸ್ಥೆಯನ್ನು ತಪಾಸಣೆ ಮಾಡಿದ್ದೇನೆ. ತಾತ್ಕಾಲಿಕವಾಗಿ ಜೈಕಿಸಾನ್‌ನ ವರ್ತಕರಿಗೆ ಎಪಿಎಂಸಿಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದರು.

ಈ ಸಮಸ್ಯೆ ಇತ್ಯರ್ಥವಾಗುವವರೆಗೆ ಜೈಕಿಸಾನ್‌ ಹಾಗೂ ಎಪಿಎಂಸಿ ಮಾರುಕಟ್ಟೆಯ ವರ್ತಕರು ಪರಸ್ಪರ ಹೊಂದಾಣಿಕೆಯಿಂದ ವ್ಯಾಪಾರ ಮುಂದುವರಿಸಬೇಕು ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ.

ಜೈಕಿಸಾನ್‌ ವರ್ತಕರ ಬೇಡಿಕೆಗಳ ಹಿನ್ನೆಲೆಯಲ್ಲಿ, ಮುಂದಿನ ಮೂರು ತಿಂಗಳ ಅವಧಿಯೊಳಗೆ ಅವರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲಾಗುತ್ತದರು. ಅಗತ್ಯವಿದ್ದರೆ ಹೊಸ ಮಳಿಗೆಗಳ ನಿರ್ಮಾಣಕ್ಕೂ ಸರ್ಕಾರ ಸಿದ್ಧವಾಗಿದೆ. ಯಾವುದೇ ತೊಂದರೆಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತರಬಹುದು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.‌

ಈ ಸಂದರ್ಭದಲ್ಲಿ ಶಾಸಕರಾದ ಆಸೀಪ್‌ (ರಾಜು) ಸೇಠ್‌, ಬಾಬಾಸಾಹೇಬ ಪಾಟೀಲ್‌, ಬೆಳಗಾವಿ ಜಿಲ್ಲಾಧಿಕಾರಿ ಮುಹಮ್ಮದ್ ರೋಶನ್‌, ಪೊಲೀಸ್ ಆಯುಕ್ತ ಭೂಷಣ ಬೊರಸೆ, ಉಪವಿಭಾಗಾಧಿಕಾರಿ ಶ್ರವಣ ನಾಯಿಕ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಸಿಂಧೆ, ಎಪಿಎಂಸಿ ಕಾರ್ಯದರ್ಶಿ ವಿಶ್ವನಾಥ ರೆಡ್ಡಿ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!