ಗೋಕಾಕ ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ “ಬೆಳಗಾವಿ ಜಿಲ್ಲಾ ಟ್ಯಾಲೆಂಟ್ ಸರ್ಚ್ ಪರೀಕ್ಷೆ – ಕನಸುಗಳಿಗೆ ಚಿನ್ನದ ದಾರಿ, ಪ್ರತಿಭೆಗೆ ಹೊಸ ವೇದಿಕೆ – 2025” ರ ಮಾಹಿತಿ ಪತ್ರವನ್ನು ಬಿಡುಗಡೆ ಮಾಡಿದರು.
ಹೊಸಾ ಪ್ರತಿಭೆ ಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸಿ ಅವರ ಮುಂದಿನ ಭವಿಷ್ಯವನ್ನು ರೋಪಿಸಿ ಕೊಳಲು ಸಹಾಯ ಮಾಡಿ ಬಹುಮಾನ ವನು ವಿತರಿಸಲಾಯಿತು
ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಜಿಲ್ಲೆಯ ಸರಕಾರಿ ಪ್ರೌಢಶಾಲೆಗಳ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯದ ಬೀಜ ಬಿತ್ತುವ ಉದ್ದೇಶದಿಂದ ಈ ಟ್ಯಾಲೆಂಟ್ ಸರ್ಚ್ ಪರೀಕ್ಷೆಯನ್ನು ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನಗಳನ್ನು ಸಹ ನೀಡಲಾಗುವುದು.
ವರದಿ : ಸದಾನಂದ ಎಂ