ಹುಕ್ಕೇರಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ್ ಅಣ್ಣ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸೋಲಾಪುರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಾಲ್ಮೀಕಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಮಾನವೀಯತೆ, ನೈತಿಕತೆ ಮತ್ತು ಜೀವನ ಮೌಲ್ಯಗಳ ಅಮರ ಸಂದೇಶವನ್ನು ನೀಡಿದ ಮಹಾನ್ ಋಷಿ. ಅವರ ಆದರ್ಶಗಳು ಸರ್ವ ಸಮಾಜದವರಿಗೂ ಪ್ರೇರಣೆಯಾಗಿ, ಎಲ್ಲ ವರ್ಗದ ಜನರು ಒಂದಾಗಿ ಸೌಹಾರ್ದತೆ, ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಪಾಲಿಸಿ ಬದುಕಲು ದಾರಿ ದೀಪವಾಗಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವಕ ಮಂಡಳದ ನೂತನ ನಾಮಫಲಕವನ್ನು ಉದ್ಘಾಟಿಸಿದರು.
ಈ ವೇಳೆ ಮುಖಂಡರಾದ ಶ್ರೀ ಶಿವರಾಜ ಪಾಟೀಲ, ಶ್ರೀ ಸಂತೋಷ ಮುಡಶಿ, ಕರನಿಂಗ ವಕೀಲರು, ಶ್ರೀ ಪ್ರಕಾಶ ಪಾಟೀಲ, ಗ್ರಾಮ ಪಂಚಾಯತಿ ಅಧ್ಯಕ್ಷೆ ಸುನಂದಾ ನಾಯಿಕ ಅವರು ಮತ್ತು ಸರ್ವ ಸಮಾಜದ ಮುಖಂಡರು ಉಪಸ್ಥಿತರಿದ್ದರು.
