ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆ ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟೆಲ್ ಮತ್ತು ಹೈಡೋ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳ ಬಂಧನ 5.50 ಕೋಟಿ ಮೌಲ್ಯದ ಮಾದಕ ಜಪ್ತಿ
ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳಿಗೆ, ಬಾತ್ಮೀಧಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಮಾಹಿತಿಯ ಆಧಾರದ ಮೇರೆಗೆ, ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾತ್ಮಿದಾರರು ತಿಳಿಸಿದ ಸ್ಥಳಕ್ಕೆ ದಾವಿಸಿ, ದಾಳಿ ಮಾಡಿ, ವಿದೇಶಿ ಪ್ರಜೆಗಳಿಬ್ಬರನ್ನು ವಶಕ್ಕೆ ಪಡೆಯಲಾಯಿತು.
ವಶಕ್ಕೆ ಪಡೆದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ವಿಚಾರಣೆಗೊಳಪಡಿಸಲಾಗಿ, ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು. ಡ್ರಗ್ ಪೆಡ್ರಿಂಗ್‌ನಲ್ಲಿ ತೊಡಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ. ಅವರುಗಳ ವಶದಲ್ಲಿದ್ದ 1 ಕೆ.ಜಿ 47 ಗ್ರಾಂ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್ ಮತ್ತು ಡ್ರಗ್‌ಪೆಡ್ಡಿಂಗ್‌ನಲ್ಲಿ ಸಂಪಾದನೆ ಮಾಡಿದ್ದ 42.800/-ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ * 2,50,00,000/-(ಎರಡು ಕೋಟಿ ಐವತ್ತು ಲಕ್ಷ ರೂಪಾಯಿ), ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿರುತ್ತದೆ.
ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳಿಗೆ, ಕಸ್ಟಂಮ್ಸ್ ಇಲಾಖೆಯ ಅಧಿಕಾರಿಗಳಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಕೆ.ಜಿ. ನಗರ ಠಾಣಾ ವ್ಯಾಪ್ತಿಯಲ್ಲಿರುವ ವಿದೇಶಿ ಅಂಚೆ ಕಛೇರಿಗೆ ವಿದೇಶಿ ಮೂಲದಿಂದ ನಿಷೇಧಿತ ಮಾದಕ ವಸ್ತುಗಳಿರುವ ಅನುಮಾನಾಸ್ಪದ ಪಾರ್ಸೆಲ್ಗಳು ಬರುತ್ತಿರುವುದಾಗಿ ತಿಳಿಸಿರುತ್ತಾರೆ.
ಈ ಮಾಹಿತಿಯ ಮೇರೆಗೆ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪಿಐ ರವರಾದ ಶ್ರೀ.ರಕ್ಷಿತ್.ಎ.ಕೆ ರವರು ಮತ್ತು ಸಿಬ್ಬಂದಿಗಳು, ಶ್ವಾನದಳದ ಸಹಾಯದೊಂದಿಗೆ ಸ್ಥಳಕ್ಕೆ ದಾವಿಸಿ ದಾಳಿ ಮಾಡಿ, ಅನುಮಾನಾಸ್ಪದ ಪಾರ್ಸೆಲ್‌ಗಳು ಪರಿಶೀಲಿಸಿ ಅದರಲ್ಲಿದ್ದ 3 ಕೆಜಿ ನಿಷೇಧಿತ ಮಾದಕ ವಸ್ತುವಾದ ಹೈಡೋಗಾಂಜಾವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಮೌಲ್ಯ ₹ 3.00,00,000/-(ಮೂರು ಕೋಟಿ ರೂಪಾಯಿ), ಗಳಾಗಿರುತ್ತದೆ. ವಿದೇಶಿ ಕಂಪನಿಗಳ ಬಿಸ್ಕೆಟ್, ಚಾಕೊಲೇಟ್ ಪ್ಯಾಕೇಟ್‌ಗಳಲ್ಲಿ ಡ್ರಗ್ಸ್‌ನ್ನು ಮರೆಮಾಚಿ ಥೈಲ್ಯಾಂಡ್ ದೇಶಗಳಿಂದ ಅಮದು ಮಾಡಿಕೊಂಡಿರುವುದು ಕಂಡುಬಂದಿರುತ್ತದೆ. ಇದರ ವಿರುದ್ಧ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಆಕ್ಟ್ ರೀತ್ಯಾ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಕಾರ್ಯ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತರು, ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ, ಜಂಟಿ ಪೊಲೀಸ್ ಆಯುಕ್ತರು, ಅಪರಾಧ, ಬೆಂಗಳೂರು ನಗರ ಮತ್ತು ಉಪ ಪೊಲೀಸ್ ಅಪರಾಧ-2, ಬೆಂಗಳೂರು ನಗರ ರವರ ನೇತೃತ್ವದಲ್ಲಿ, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಎಸಿಪಿ ರವರಾದ ಹೆಚ್.ಕೆ. ಮಹಾನಂದ್ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ರವರಾದ ವಿ.ಡಿ.ಶಿವರಾಜು, ರಕ್ಷಿತ್.ಎ.ಕೆ ಮತ್ತು ಸಿಬ್ಬಂದಿಯವರ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.
