ಮೂಡಲಗಿ : ಚಿಕ್ಕೋಡಿ ಲೋಕಸಬಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಇಂದು 2025–26ನೇ ಸಾಲಿನ 14/17 ವರ್ಷ ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾಟಗಳು, 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟಗಳು ಹಾಗೂ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಮತ್ತು ವಿಶೇಷ ಚೇತನರ ಕ್ರೀಡಾಕೂಟಗಳು ಇತ್ಯಾದಿ ಸ್ಪರ್ಧೆಗಳಿಗೂ ಇಲ್ಲಿನ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ಚಾಲನೆ ನೀಡಿ ಮಾತನಾಡಿದರು
ಈ ಸಂದರ್ಭದಲ್ಲಿ ಬಿ.ಆರ್. ಪಾಟೀಲ, ನಿವೃತ್ತ ಸಹ ನಿರ್ದೇಶಕ ಗಜಾನನ ಮನ್ನಿಕೇರಿ, ಡಿಡಿಪಿಐ ಸಿತಾರಾಮ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು ಜುನೇದ ಪಟೇಲ, ಸಿದ್ರಾಮ ಲೋಹನ್ನವರ, ಬಿ.ಬಿ.ಪಾಟೀಲ, ಶಂಕರ ಹೊಸಮನಿ, ಗಜಾನನ ಯರಗಣವಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ.ಎಚ್
