ಬೆಳಗಾವಿ : ಕರ್ನಾಟಕ ಸರಕಾರ ಲೋಕೋಪಯೊಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಮೂರು ದಿನಗಳ ಕಾಲ ಭವ್ಯವಾಗಿ ಜರುಗಿದ ಐತಿಹಾಸಿಕ ಚನ್ನಮ್ಮನ ಕಿತ್ತೂರು ಉತ್ಸವ – 2025 ರ ಸಮಾರೋಪ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಜೊತೆಗೆ ಭಾಗವಹಿಸಿದರು.
ನಮ್ಮ ನಾಡಿನ ಗೌರವ ಮತ್ತು ಸ್ವಾತಂತ್ರ್ಯದ ಸಂಕೇತವಾದ ವೀರರಾಣಿ ಕಿತ್ತೂರು ಚನ್ನಮ್ಮನವರ ಶೌರ್ಯಗಾಥೆ,
ಕಿತ್ತೂರಿನ ಮಣ್ಣು ಶೌರ್ಯ, ತ್ಯಾಗ ಮತ್ತು ರಾಷ್ಟ್ರಭಕ್ತಿಯ ಪ್ರೇರಣೆಯಾಗಿ ನಾಡಿನ ಯುವ ಪೀಳಿಗೆಗೆ ಸ್ಪೂರ್ತಿ ನೀಡುತ್ತಿದರು.
ಈ ಸಮಾರಂಭದಲ್ಲಿ ವಿವಿಧ ಮಠಗಳ ಮಠಾಧೀಶರು, ವಿಧಾನ ಪರಿಷತ್ ನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಆಸಿಫ್ ಸೇಠ್, ವಿಜಯಾನಂದ ಕಾಶಪ್ಪನವರ್, ಎನ್.ಎಚ್.ಕೋನರೆಡ್ಡಿ, ವಿಶ್ವಾಸ್ ವೈದ್ಯ, ವಿ.ಪ. ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲೆಯ ವಿವಿಧ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ.ಎಚ್
