ಬೆಂಗಳೂರು: ರಾಜ್ಯದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವೊಮ್ಮೆ ಬೈಕ್ ಸವಾರರು ಕಾರನ್ನು ಹಿಂಬಾಲಿಸಿ ಹಲ್ಲೆ, ಬೆದರಿಕೆ ಘಟನೆಗಳು ನಡೆಯುತ್ತಿರುತ್ತವೆ.
ಆದರೆ ಇಲ್ಲೊಂದು ಪ್ರಕರಣದಲ್ಲಿ ಜಸ್ಟ್ ಕಾರಿನ ಮಿರರ್ಗೆ ಬೈಕ್ ಟಚ್ ಆಗಿದ್ದಕ್ಕೆ ಕಾರಿನಲ್ಲಿದ್ದ ದಂಪತಿ ಬೈಕ್ ಸವಾರರನ್ನು ಹಿಂಬಾಸಿ ಬೈಕ್ ಗೆ ಡಿಕ್ಕಿ ಹೊಡೆದು ಸಾಯಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮ ಲೇಔಟ್‌ನಲ್ಲಿ ಅಕ್ಟೋಬರ್ 25ರಂದು ರಾತ್ರಿ ಈ ಘಟನೆ ನಡೆದಿದೆ.
ದರ್ಶನ್ ಮತ್ತು ವರುಣ್ ಎಂಬುವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರಿನ ಮಿರರ್ ಗೆ ಟಚ್ ಆಗಿದೆ. ಇದರಿಂದ ಕೋಪಗೊಂಡ ಕಾರಿನಲ್ಲಿದ್ದ ಮನೋಜ್ ಕುಮಾರ್ ಮತ್ತು ಆರತಿ ಶರ್ಮಾ ದಂಪತಿ ಎರಡು ಕಿಲೋಮೀಟರ್‌ನಷ್ಟು ಹಿಂಬಾಲಿಸಿ ಬೈಕ್‌ಗೆ ಗುದ್ದಿದ್ದಾರೆ.
ಪರಿಣಾಮ ದರ್ಶನ್ ಮತ್ತು ವರುಣ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೂ ದರ್ಶನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇನ್ನು ವರುಣ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವರದಿ : ಮುಬಾರಕ್ ಬೆಂಗಳೂರು
