ಬಸವಕಲ್ಯಾಣ : ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ರಿ.) ಬೀದರ ಮತ್ತು ಹಣ್ಮೂ ಪಾಜಿ ಗೆಳೆಯರ ಬಳಗದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪೂರ ಗ್ರಾಮದ ನಿವಾಸಿ ‘ಗ್ಯಾರಂಟಿ ನ್ಯೂಸ್’ ಬೀದರ್ ಜಿಲ್ಲಾ ವರದಿಗಾರರಾದ ಶಿವು ಮಠಪತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಣ್ಮು ಪಾಜಿ ತಿಳಿಸಿದ್ದಾರೆ. 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ, ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ, ಮಾಧ್ಯಮ, ಕಲೆ, ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ 70 ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ನೀಡುತ್ತಿರುವ ವರದಿಗಾರ ಶಿವು ಮಠಪತಿ ಅವರ ಬದ್ಧತೆ, ನೈಜ ಪತ್ರಿಕೋದ್ಯಮ ಹಾಗೂ ಸಮಾಜಮುಖಿ ವರದಿಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ನವೆಂಬರ್ 10 ರಂದು ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಹಣ್ಮು ಪಾಜಿ ಅವರು ತಿಳಿಸಿದ್ದಾರೆ. ಬೀದರನ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಲ್ಲಿಸಲಾಗುವುದು ಎಂದು ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
