ಬೆಳಗಾವಿ : ಬಹು ದಿನಗಳಿಂದ ಕತ್ತಿ ಹಾಗೂ ಜಾರಕಿಹೊಳಿ ಅವರ ನಡುವೆ ನಡೆಯುತ್ತಿರುವ ಡಿಸಿಸಿ ಬ್ಯಾಂಕ ಚುನಾವಣೆಯಲ್ಲಿ 9 ನಿರ್ದೇಶಕರು ಅವಿರೋದ್ ಆಯ್ಕೆ ಯಾಗಿದ್ದರು ಈಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜಾರಕಿಹೊಳಿ ಯವರು ಮೇಲುಗೈ ಸಾಧಿಸಿದ್ದಾರೆ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ಶ್ರೀ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀ ರಾಜು ಕಾಗೆ ಅವರು ಅವಿರೋಧವಾಗಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು
ಸಹಕಾರ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಇವರ ನೇತೃತ್ವದಲ್ಲಿ ಬ್ಯಾಂಕ್ ಇನ್ನಷ್ಟು ಪ್ರಗತಿ ಪಥದಲ್ಲಿ ನಡೆದು, ರೈತರು ಹಾಗೂ ಸಹಕಾರ ಕ್ಷೇತ್ರದ ಹಿತಾಸಕ್ತಿಗೆ ಬಲ ನೀಡಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಅರಭಾವಿ ಶಾಸಕರಾದ ಶ್ರೀ ಬಾಲಚಂದ್ರ ಅಣ್ಣಾ ಜಾರಕಿಹೊಳಿ ಹಾಗೂ ಬ್ಯಾಂಕ್‌ಗೆ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.
