ಪ್ರಾಥಮಿಕ ಶಾಲೆ”ಯ ಶತಮಾನೋತ್ಸವ ಕಾರ್ಯಕ್ರಮ

ರಾಯಬಾಗ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ “ನಮ್ಮೂರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ”ಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದರು.

1925ರಲ್ಲಿ ಸ್ಥಾಪನೆಯಾದ ಈ ಶಾಲೆಯು ಶತಮಾನದ ಕಾಲದಿಂದ ನೂರಾರು ವಿದ್ಯಾರ್ಥಿಗಳ ಭವಿಷ್ಯ ಕಟ್ಟುವ ಪವಿತ್ರ ಶಿಕ್ಷಣ ಕೇಂದ್ರವಾಗಿ ಬೆಳೆದಿದೆ.‌ ಗ್ರಾಮೀಣ ಶಿಕ್ಷಣದ ಮಹತ್ವವನ್ನು ಹಾಗೂ ನಾವೆಲ್ಲರೂ ಸೇರಿ ಮುಂದಿನ ಶತಮಾನದತ್ತ ಈ ಶಾಲೆಯನ್ನು ಇನ್ನಷ್ಟು ಪ್ರಗತಿಯತ್ತ ಕೊಂಡೊಯ್ಯುವ ಸಂಕಲ್ಪವನ್ನು ಹಂಚಿಕೊಂಡೆ.

ಪರಮಪೂಜ್ಯ ಶ್ರೀ ಮಹಾಂತ ಮಹಾಸ್ವಾಮಿಗಳು, ವಿರಕ್ತಮಠ, ಶೇಗುಣಸಿ, ಪರಮಪೂಜ್ಯ ಶ್ರೀ ಸಿದ್ದರಾಮ ಶಿವಯೋಗಿ ಮಹಾಸ್ವಾಮಿಗಳು, ಶಿವಯೋಗಾಶ್ರಮ, ರನ್ನಬೆಳಗಲಿ,
ಗೌರವಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ — ಶ್ರೀಕಾಂತ್ ಪಡಸಲಗಿ ಗುರೂಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಮುಖಂಡರು ಮತ್ತು ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!