ಕೃಷ್ಣಮೃಗಗಳ ರಕ್ಷಣೆಗೆ ಮತ್ತು ಈ ನಿಗೂಢ ಸಾವುಗಳಿಗೆ ಕಾರಣವೇನು ಸತೀಶ ಜಾರಕಿಹೊಳಿ

ಬೆಳಗಾವಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಸಮೀಪದ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರುಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ.

ಈ ಕುರಿತು ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರಂಗಸ್ವಾಮಿ ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪ್ರಕರಣದ ಸಂಪೂರ್ಣ ವಿವರಗಳನ್ನು ಸ್ವತಃ ತಿಳಿದುಕೊಂಡಿದ್ದೇನೆ. ಕೃಷ್ಣಮೃಗಗಳ ರಕ್ಷಣೆಗೆ ಮತ್ತು ಈ ನಿಗೂಢ ಸಾವುಗಳಿಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತಕ್ಷಣವೇ ಸಮಗ್ರ ತನಿಖೆ ಕೈಗೊಳ್ಳುವಂತೆ ಸೂಚಿಸಿದರು.

ಇದಲ್ಲದೆ, ಅರಣ್ಯ ಸಚಿವರು ಈಗಾಗಲೇ ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಸೋಂಕು ಹರಡುವಿಕೆಯಿಂದ ಸಾವು ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸಿಬ್ಬಂದಿಯ ನಿರ್ಲಕ್ಷ್ಯ ಸಂಬಂಧಿಸಿದಂತೆ ಬಂದಿರುವ ಆರೋಪಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಉಳಿದಿರುವ ಕೃಷ್ಣಮೃಗಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮಗಳನ್ನು ತಕ್ಷಣ ಜಾರಿಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಶ್ರೀ ಮಲಗೌಡ ಅಣ್ಣಾ ಪಾಟೀಲ ಹಾಗೂ ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!