ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ

ಔರಾದ್ : ಪಟ್ಟಣದ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಕಂಡು ಬಂದಲ್ಲಿ ಕುಡಲೇ ಪಟ್ಟಣ ಪಂಚಾಯಿತಿಗೆ ತಿಳಿಸಿ, ಅಂತಹ ಬೀದಿ ನಾಯಿಗಳನ್ನು ಸೆರೆ ಹಿಡಿಯಲಾಗುತ್ತದೆ ಎಂದು ಪಪಂ ಮುಖ್ಯಾಧಿಕಾರಿ ಸ್ವಾಮಿದಾಸ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಮಾನ್ಯ ಸವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ : ೫/೨೦೨೫ರಲ್ಲಿ ನೀಡಿದ ನಿರ್ದೇಶನದಂತೆ ಶಾಲಾ-ಕಾಲೇಜುಗಳು, ಅಂಗನವಾಡಿ, ಆಸ್ಪತ್ರೆ, ಕ್ರೀಡಾಂಗಣ, ಬಸ್ ನಿಲ್ದಾಣದಲ್ಲಿ ನಾಯಿಗಳು ಕಂಡು ಬಂದಲ್ಲಿ ಕುಡಲೇ ಗಮನಕ್ಕೆ ತರಬೇಕು. ಬೀದಿನಾಯಿಗಳ ತಡೆಗಟ್ಟಲು ಸ್ಥಳಾಂತರಿಸಲು ಸಿಬ್ಬಂದಿಗಳ ನೇಮಕ ಮಾಡಲಾಗುವದು. ನ್ಯಾಯಲಯದ ಆದೇಶ ಉಲ್ಲಂಘನೆ ಮಾಡಿದಲ್ಲಿ ನ್ಯಾಯಲಯದ ಆದೇಶದಂತೆ ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಪಪಂ ಮುಖ್ಯಾಧಿಕಾರಿ ಸ್ವಾಮಿದಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ರಾಚಯ್ಯ ಸ್ವಾಮಿ

error: Content is protected !!