ಬೆಳಗಾವಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ದಿ. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಬೆಳಗಾವಿಯ ಸಭಾಭವನದಲ್ಲಿ ಬೆಳಗಾವಿ ತಾಲೂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾಸಿಕ (ಬಿಡಿಪಿ) ಸಭೆಯು ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು.
ಸಭೆಯಲ್ಲಿ ಸಹಕಾರಿ ಸಂಘಗಳ ಸುಸೂತ್ರ ನಿರ್ವಹಣೆ ಮತ್ತು ಪಾರದರ್ಶಕ ಆಡಳಿತಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಚರ್ಚಿಸಿದರು.
ಸಹಕಾರಿ ಕ್ಷೇತ್ರದ ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ಪರಿಣಾಮಕಾರಿ ಸೇವೆಗಳನ್ನು ಗುರಿಯಾಗಿಸಿಕೊಂಡು ಸಭೆಯಲ್ಲಿ ಅಗತ್ಯ ಸೂಚನೆಗಳು ಮತ್ತು ಮಾರ್ಗದರ್ಶನವನ್ನು ನೀಡಿದರು.
ವರದಿ : ಸದಾನಂದ ಎಂ
