ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಾಮಾಣಿಕ ಹಾಗೂ ಪ್ರಬುದ್ಧ ರಾಜಕರಣಿ ಯಾಗುವುವುದರ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖ ಬಬ್ಲು ಹೇಳಿದರು
ಪಟ್ಟಣದ ಬಿಆರ್’ಸಿ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 47ನೇ ಜನ್ಮದಿನದ ಪ್ರಯುಕ್ತ ಗೆಳೆಯರ ಬಳಗದ ವತಿಯಿಂದ ಸಂವಿಧಾನ ಓದು ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ ವಿತರಿಸಿ ಮಾತನಾಡಿದ ಅವರು, ಚಿತ್ತಾಪುರ ಮತಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡುವುದರ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಶೈಕ್ಷಣಿಕ ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ಬಿಡುಗಡೆ ಮಾಡಿ ಸೌಲಭ್ಯವನ್ನು ಕಲ್ಪಿಸುತ್ತಿರುವ ರಾಜ್ಯದ ಏಕೈಕ ನಾಯಕರಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆನ್ನುವ ಉದ್ದೇಶದಿಂದ ಸಚಿವರು ಗ್ರಂಥಾಲಯಗಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು
ಇದೇ ವೆಳೆ 1000 ಸಂವಿಧಾನ ಓದು ಪುಸ್ತಕಗಳನ್ನು 49 ಸರ್ಕಾರಿ ಪ್ರೌಢ ಶಾಲೆಗಳಿಗೆ, ಸಮಾಜ ಕಲ್ಯಾಣ ಇಲಾಖೆಗೆ 100 ಪುಸ್ತಕಗಳು, ತಾಪಂ ಅಡಿಯಲ್ಲಿ ಬರುವ ಅರಿವು ಕೇಂದ್ರಗಳಿಗೆ 300 ಹಾಗೂ ಅಲ್ಪಸಂಖ್ಯಾತ ಇಲಾಖೆಗೆ 100 ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಿದರು
ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಮಹ್ಮದ್ ಶರೀಫ್, ರಫೀಕ್ ಲಿಂಕ್, ಎಂ.ಎ ನಯೀಮ್, ಸೀರಾಜ್, ರಾಜು ಸಾಹುಕಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು
ವರದಿ : ಮೊಹಮ್ಮದ್ ಅಲಿ ಚಿತ್ತಾಪುರ
