ಬಸವಕಲ್ಯಾಣ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹಿಸಿ ಬಸವಕಲ್ಯಾಣ ನಗರದ ಅಬಕಾರಿ ಇಲಾಖೆ ನಿರೀಕ್ಷರಿಗೆ KRS ಮನವಿ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್) ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ʼಬಸವಕಲ್ಯಾಣ ಸೇರಿದಂತೆ ತಾಲೂಕಿನ ಹಳ್ಳಿ-ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಯುವಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಂದಿ ದುಶ್ಚಟಗಳಿಗೆ ತುತ್ತಾಗುತ್ತಿದ್ದಾರೆ. ಕುಡುಕರ ಹಾವಳಿಯಿಂದ ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ಇಲ್ಲದಂತಾಗಿದೆʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ವರದಿ : ಆದಿತ್ಯ ಗಜರೆ

error: Content is protected !!