ಗೋಕಾಕ : ಯುವ ನಾಯಕರಾದ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ನ್ಯು ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಮ್ಮಿಕೊಂಡಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಅಂಕಲಗಿಯ ಶ್ರೀ ಅಡವಿಸಿದ್ಧೇಶ್ವರ ಮಠದ ಪ. ಪೂ. ಡಾ ಅಮರಸಿದ್ದೇಶ್ವರ ಸ್ವಾಮೀಜಿ , ಗೋಕಾಕ ಶೂನ್ಯ ಸಂಪಾದನಾ ಮಠದ ಪ. ಪೂ. ಶ್ರೀ ಬಸವಪ್ರಭು ಸ್ವಾಮೀಜಿ, ಉದಗಟ್ಟಿಯ ಶ್ರೀ ಶ್ರೀ ದೇವಿ ಅಮ್ಮಾಜಿ ಅವರು ವಹಿಸಿದ್ದರು, ಯುವ ಮುಖಂಡರಾದ ಸರ್ವೋತ್ತಮ ಜಾರಕಿಹೊಳಿ, ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಕರವೇ ರಾಜ್ಯ ಸಂಚಾಲಕ ಸುರೇಶ ಗವನ್ನವರ, ಕರವೇ ಗೋಕಾಕ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಾಮನಿರ್ದೇಶಿತ ಸದಸ್ಯ ಆರೀಫ್ ಪೀರಜಾದೆ, ಗೋಕಾಕ ತಾಲೂಕಾ ವೈದ್ಯಾಧಿಕಾರಿ ರವೀಂದ್ರ ಅಂಟಿನ್, ಪತ್ರಕರ್ತ ಸಾದಿಕ್ ಹಲ್ಯಾಳ ಸೇರಿ ಪ್ರಸಿದ್ಧ ಹಾಸ್ಯ ಕಲಾವಿದರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ
