ಶಿಕ್ಷಣ ಭೀಷ್ಮ ದಿವಂಗತ ಎಚ್.ಎಂ. ಗಂಗಾಧರಯ್ಯನವರ ಸ್ಮರಣಾರ್ಥ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ

ತುಮಕೂರು : ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಭೀಷ್ಮ ದಿವಂಗತ ಎಚ್.ಎಂ. ಗಂಗಾಧರಯ್ಯನವರ ಸ್ಮರಣಾರ್ಥ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಎಸ್.ಎಸ್. ಐ. ಟಿ ಕ್ಯಾಂಪಸ್ ನಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯನ್ನು ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕರು ಹಾಗೂ ಚಿತ್ರಕಲಾವಿದರೂ ಆದ ಡಾ.ಸುರೇಶ್ ಬಾಬು ಉದ್ಘಾಟನೆಯನ್ನು ಮಾಡಿದರು. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾoಶುಪಾಲರಾದ ಡಾ.ಎಂ. ಎಸ್ ರವಿಪ್ರಕಾಶ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹೇ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಅಶೋಕ್ ಮೆಹತಾ, ಪರೀಕ್ಷಾoಗ ವಿಭಾಗದ ನಿಯಂತ್ರಕರಾದ ಡಾ. ಗುರುಶಂಕರ್. ಸಿ. ಕುಲಾಧಿಪತಿಗಳ ಸಲಹೆಗಾರರಾದ ವಿವೇಕ್ ವೀರಯ್ಯ, ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಹಾಗೂ ಸ್ಪರ್ಧೆಯ ಸಂಚಾಲಕರಾದ ಡಾ.ಸಹನಾ ಟಿ.ಎಸ್. ಸಹ ಸಂಯೋಜಕರಾದ ಡಾ. ಶಿವರಾಜು. ಜಿ. ಡಿ. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದ ಎಲ್ಲಾ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂಧಿ ವರ್ಗದವರು ಭಾಗವಹಿಸಿದ್ದರು.

error: Content is protected !!