ಬೆಳಗಾವಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿಯ ಹ್ಯೂಮ್ ಪಾರ್ಕ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಬೆಳೆಗಳ ಬೆಳವಣಿಗೆ ಪ್ರಾಮುಖ್ಯತೆ ಬೆಳೆಸುವ ವಿಧಾನ ತೋಟಗಾರಿಕೆ ಇಲಾಖೆ ಯವರು ತಿಳಿಸಿದರು ಬೆಳಗಾವಿಯ ಹ್ಯೂಮ ಪಾರ್ಕನಲ್ಲಿ ನಡೆದ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನ ಗೊಂಡಿತು ಕಾರ್ಯಕ್ರಮ ಯಶಸ್ವಿ ಯಾಗಿ ನಡೆಯಿತು
ಈ ವೇಳೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಾದೇಶಿಕ ಆಯುಕ್ತರಾದ ಕೆ.ಎಂ.ಜಾನಕಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಐ.ಕೆ.ದೊಡ್ಡಮನಿ ಸೇರಿದಂತೆ ಹಲವು ಗಣ್ಯರು ಹಾಗೂ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ
