ಬಿಜೆಪಿ ವಿರುದ್ದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

ಬೆಳಗಾವಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ರಾಹುಲ ಅಣ್ಣಾ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ನಮ್ಮ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ ಮತ್ತು ಶ್ರೀ ರಾಹುಲ್ ಗಾಂಧಿ ಅವರ ಮೇಲೆ ಕೇಂದ್ರ ಸರ್ಕಾರವು ಇ.ಡಿ ಮೂಲಕ ಸುಳ್ಳು ಕೇಸ್ ದಾಖಲಿಸಿ, ನ್ಯಾಯಾಲಯದಲ್ಲಿ ಮುಖಭಂಗಕ್ಕೆ ಒಳಗಾಗಿದೆ. ‌ಈ‌ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು

​ಕೇಂದ್ರದ ಬಿಜೆಪಿ ಸರ್ಕಾರವು ಇ.ಡಿ, ಸಿಬಿಐ ಮತ್ತು ಚುನಾವಣಾ ಆಯೋ ನಂತಹ ಸ್ವಾಯತ್ತ ಸಂಸ್ಥೆಗಳನ್ನು ತನ್ನ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ. ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ‌. ಈ ದಮನಕಾರಿ ನೀತಿಯ ವಿರುದ್ಧ ನಮ್ಮ ಪ್ರತಿಭಟನೆ ನಿಲ್ಲದು. ಸತ್ಯದ ಹಾದಿಯಲ್ಲಿ ನಡೆಯುತ್ತಿರುವ ನಮ್ಮ ನಾಯಕರ ಪರವಾಗಿ ಕಾಂಗ್ರೆಸ್ ಸದಾ ಬೆನ್ನಿಗೆ ನಿಲ್ಲಲಿದೆ.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಮುಖಂಡರಾದ ಶ್ರೀ ಮೃಣಾಲ್‌ ಹೆಬ್ಬಾಳ್ಕರ್, ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಅಂಕಲಗಿ, ವಿಜಯ ತಳವಾರ ಬೆಳಗಾವಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸಾಗರ ದಿವಟಗಿ, ಕೆಪಿಸಿಸಿ ಸದಸ್ಯ ಪ್ರದೀಪ್ ಎಂ.ಜೆ. ಸೇರಿದಂತೆ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಮತ್ತು ಯುವ ಕಾಂಗ್ರೆಸ್‌ನ ಮಿತ್ರರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!