ಚಿಟಗುಪ್ಪ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಚಿಟಗುಪ್ಪ ವತಿಯಿಂದ ಇಂದು ಸರಕಾರಿ ಕನ್ಯಾಪ್ರೌಢ ಶಾಲೆಯಲ್ಲಿ ಶ್ರೀ ಡಾ ಚನ್ನಬಸವ ಪಟ್ಟದೇವರು136ನೇ ಜಯಂತೋತ್ಸವವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಮಹಾರುದ್ರಪ್ಪ ಅಣದೂರ ಮಾತನಾಡಿ ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ, ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾಮೂರ್ತಿ, ಅನಾಥರ ನೊಂದವರ ಧ್ವನಿ, ಗಡಿ ಭಾಗದಲ್ಲಿ ಕನ್ನಡ ಉಳಿಸಿ ಬೆಳೆಸಿದ ಕನ್ನಡ ಕಿರ್ತಿ ಇವರಿಗೆ ಸಲ್ಲುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಅನೀಲಕುಮಾರ ಸಿಂಧೆ ಮಾತನಾಡಿ ಭಾಷಾ ಪ್ರೇಮಿ, ವಚನ ಸಾಹಿತ್ಯ ತತ್ವಗಳನ್ನು ಸಾಗರದಾಚೆಗೂ ಕೊಂಡೊಯ್ದ ಮೇಧಾವಿ ಸಂತರ ಸಂತ ಕಲ್ಯಾಣದ ಪ್ರಜ್ವಲ್ ಜ್ಯೋತಿ ಭಾಲ್ಕಿ ಹಿರೇಮಠ್ ಸಂಸ್ಥಾನದ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದೇವರ ನಿಸ್ವಾರ್ಥ ಸೇವೆ ಅನನ್ಯವಾದುದ್ದು. ಎಂದು ನುಡಿದರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸಾಹಿತಿಗಳು ಪ್ರೌಢ ಶಾಲೆಯ ಮುಖ್ಯ ಗುರುಗಳು ಪ್ರಾಚಾರ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
