ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ

ಹುಮನಾಬಾದ : ನಗರದ ರಾಷ್ಟ್ರೀಯ ಹೆದ್ದಾರಿ ಬದಿಯ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ಭಾನುವಾರ ಅಯ್ಯಪ್ಪ ಸ್ವಾಮಿ ಪೂಜಾ ಕಾರ್ಯಕ್ರಮ ವೈಭವದಿಂದ ಜರುಗಿತು.

ಬೆಳಗ್ಗೆಯಿಂದ ದೇವಸ್ಥಾನದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಷ್ಪಾರ್ಚನೆ, ದೀಪಾರ್ಚನೆ ಸೇರಿದಂತೆ ಧಾರ್ಮಿಕ ಪರಂಪರೆಯಂತೆ ವಿಶೇಷ ಪೂಜೆ ಸಲ್ಲಿಸಿದ, ಬಳಿಕ ಪಾಟೀಲ್ ಪರಿವಾರಸ್ಥರು ಭಕ್ತಿಭಾವದಿಂದ ಪ್ರಾರ್ಥಿಸಿ, ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ್, ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್, ಎಂಎಲ್ಸಿ ಭೀಮರಾವ ಪಾಟೀಲ್, ಜಿಪಂ. ಮಾಜಿ ಸದಸ್ಯ ವೀರಣ್ಣ ಪಾಟೀಲ್, ಯುವ ಉದ್ಯಮಿ ಆಕಾಶ ತಾಳಂಪಳ್ಳಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ್, ರೇವಣಸಿದ್ದಪ್ಪ ಪಾಟೀಲ್, ರುದ್ರಂ ಪಾಟೀಲ್, ಗಣೇಶ ಪಾಟೀಲ್ ಸೇರಿ ಅನೇಕರಿದ್ದರು.

error: Content is protected !!