ದಿನಾಂಕ, 24/12/2025 ರಂದು ವಿಜಯಲಕ್ಷ್ಮಿ ದರ್ಶನ್, ಹೊಸಕೆರೆಹಳ್ಳಿ ಬೆಂಗಳೂರು ರವರು ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಅಶ್ಲೀಲ ಕಮೆಂಟ್‌ಗಳನ್ನು ಹಾಕಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅಂತಹ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಿದ್ದ 18 ಕ್ಕೂ ಹೆಚ್ಚು ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದ ತನಿಖೆಯನ್ನು ಕೈಗೊಂಡಿದ್ದ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಫಿರ್ಯಾದುದಾರರು ಹಾಗೂ ಅವರ ಕುಟುಂಬದವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದಂತಹ ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ತನಿಖೆ ಮುಂದುವರೆಸಿದ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ದಿನಾಂಕ. 04/01/2026 ರಂದು ಹುಬ್ಬಳ್ಳಿ ಮೂಲದ ಪೆಟ್ರೋಲ್ ಬಂಕ್ ಮ್ಯಾನೇಜರ್ ನಾಗರಾಜ್ ಗುಳ್ಳಪ್ಪ ತಳವಾರ ಬಿನ್ ಗುಳ್ಳಪ್ಪ ತಳವಾರ, 23 ವರ್ಷ, ಕೇಶವಪುರ, ಹುಬ್ಬಳ್ಳಿ ಹಾಗೂ ಧಾರವಾಡದ ಲೆಕ್ಕಪರಿಶೋಧಕ (ಆಡಿಟರ್) ಪ್ರಶಾಂತ್ ತಳವಾರ ಬಿನ್ ಕರಿಯಪ್ಪ ತಳವಾರ, 23 ವರ್ಷ, ಯಳವಾಲ, ಧಾರವಾಡ ಎಂಬ ಮತ್ತಿಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಕೈಗೊಂಡಿರುತ್ತಾರೆ. ಬಾಕಿ ಇರುವ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಈ ಕಾರ್ಯಾಚರಣೆಯನ್ನು, ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸೀಮಾಂತಕುಮಾರ್ ಸಿಂಗ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಅಪರ ಪೊಲೀಸ್ ಆಯುಕ್ತರು, ಅಪರಾಧ ರವರಾದ ಅಜಯ್ ಹಿಲೋರಿ, ಐಪಿಎಸ್ ಮತ್ತು ರಾಜಾ ಇಮಾಮ್ ಕಾಸಿಂ ಪಿ, ಉಪ ಪೊಲೀಸ್ ಅಪರಾಧ-2, ಬೆಂಗಳೂರು ನಗರ ರವರುಗಳ ಮೇಲ್ವಿಚಾರಣೆಯಲ್ಲಿ, ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.
ವರದಿ : ಮುಬಾರಕ್
