ನೂತನವಾಗಿ ಪಂಚ ಗ್ಯಾರಂಟಿ ಯಡ್ರಾಮಿ ತಾಲೂಕಿನ ಸದಸ್ಯ, ಹಾಗೂ ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ಜಿಲ್ಲಾಧ್ಯಕ್ಷ.
ಯಡ್ರಾಮಿ: ಕಾಂಗ್ರೆಸ್ ಪಕ್ಷದಲ್ಲಿ ಎರಡನೇ ದರ್ಜೆಯ ನಾಯಕರನ್ನು ಬೆಳೆಸುವುದು ಮತ್ತು ಹೆಚ್ಚು ಹೆಚ್ಚಾಗಿ ಯುವಕರನ್ನು ಪಕ್ಷಕ್ಕೆ ಸೇರಿಸಿಕೊಂಡು ಅವಕಾಶಗಳನ್ನು ಕೊಡುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಪುನಃ ಚೇತನ ಗೊಳಿಸಿ, ಶಕ್ತಿ ತುಂಬುವುದು ಅತ್ಯವಶ್ಯಕವಾಗಿದೆ ಎಂದು ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯಾಧ್ಯಕ್ಷ ಡಾ. ಸಿ. ರಂಗಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಕಲಬುರ್ಗಿ ಜಿಲ್ಲೆಯ ಬೀದಿಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷರಾಗಿ ಮಹಿಬೂಬ ಮನಿಯಾರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಿ ಮಾತನಾಡಿದರು. ಬಹುದಿನಗಳಿಂದ ಕಲ್ಬುರ್ಗಿ ಮತ್ತು ರಾಯಚೂರು ವಿಭಾಗದ ಅಧ್ಯಕ್ಷರು ಗಳನ್ನು ನೇಮಕ ಮಾಡುವಲ್ಲಿ ವಿಳಂಬವಾಗಿತ್ತು. ಈಗ ಉತ್ತಮ ಯುವಕರು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಲು ಮುಂದೆ ಬಂದಿರುವುದು ನಮ್ಮ ಪಕ್ಷಕ್ಕೆ ಬಲ ಹಾಗೂ ಶಕ್ತಿ ತುಂಬಿದೆ ಎಂದರು.
ಮಹಿಬೂಬ ಮನಿಯಾರ ಅವರಿಗೆ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ರವರು ಶಿಫಾರಸ್ಸು ಮಾಡಿರುವುದರಿಂದ ಕಲ್ಬುರ್ಗಿ ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಕಲ್ಬುರ್ಗಿ ಜಿಲ್ಲೆಯಲ್ಲಿ ಸುಮಾರು 20 ವರ್ಷದಿಂದ ನಿಷ್ಠಾವಂತ ಕಾರ್ಯಕರ್ತರಾಗಿ, ಉತ್ತಮ ಜನಪರ ಕೆಲಸಗಳನ್ನು ಮಾಡಿ ಅನೇಕ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಮಹಿಬೂಬ ಮನಿಯಾರ.
ಜನಪರ ಸೇವೆ: 2015 ರಿಂದ 2020 ರವರೆಗೆ ಮಳ್ಳಿ ಗ್ರಾಮ ಪಂಚಾಯತಿ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 82 ಗುಂಪು ಶೌಚಾಲಯಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ. ಅದಲ್ಲದೆ 2010 ರಿಂದ 2020ರವರೆಗೆ ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ಜೇವರ್ಗಿ ತಾಲೂಕಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರಂತೆ 60 ಗ್ರಾಂ ಶಾಖೆಗಳನ್ನು ಸ್ಥಾಪನೆ ಮಾಡಿದ್ದಾರೆ. ಈಗ ಪಂಚ ಗ್ಯಾರಂಟಿ ಯೋಜನೆ ಅಡಿಯಲ್ಲಿ ಯಡ್ರಾಮಿ ತಾಲೂಕಿನ ಸದಸ್ಯರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು ಹರ್ಷ ವ್ಯೆಕ್ತಪಡಿಸಿದರು.
ಎಲ್ಲಾ ಸಮುದಾಯದ ಮುಖಂಡರ ಜೊತೆ ಉತ್ತಮ ಒಡನಾಟ ಹೊಂದಿರುವ ಮಹಿಬೂಬ ಮನಿಯಾರ ಇವರು ಕಲ್ಬುರ್ಗಿ ಜಿಲ್ಲೆಯ ಬೀದಿಬದಿ ವ್ಯಾಪಾರಿಗಳ ಪರವಾಗಿ ಉತ್ತಮ ಕರ್ತವ್ಯ ನಿರ್ವಹಿಸುವಲ್ಲಿ ಯಾವುದೇ ಸಂದೇಹವಿಲ್ಲ ಎಂದು ನನಗೆ ಮನವರಿಕೆಯಾಗಿದೆ ಎಂದು ರಾಜ್ಯಾಧ್ಯಕ್ಷ ರಂಗಸ್ವಾಮಿ ಹೇಳಿದರು.
ಅದೇ ವೇಳೆ ಮಾತನಾಡಿದ ಮಹಿಬೂಬ ಮನಿಯಾರ ಕಲಬುರ್ಗಿ ಜಿಲ್ಲೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ರಾಜ್ಯಾಧ್ಯಕ್ಷ ಡಾ. ಸಿ.ಈ. ರಂಗಸ್ವಾಮಿ ಹಾಗೂ ಜೇವರ್ಗಿ- ಯಡ್ರಾಮಿ ಶಾಸಕ ಡಾ. ಅಜಯ್ ಸಿಂಗ್ ಮತ್ತು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಮಂತ್ರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಯಡ್ರಾಮಿ ತಾಲೂಕಿನ ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ರುಕುಂ ಪಟೇಲ್ ಇಜೇರಿ ಅವರಿಗೆ ಪತ್ರಿಕೆ ಮೂಲಕ ಹೃತ್ಪೂರ್ವಕ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಅಧ್ಯಕ್ಷ ಕಾವ್ಯ ಶ್ರೀ ರಾಜ್ಯ ಸಂಘಟನಾ ಕಾರ್ಯದರ್ಶಿ, ಅತಿಕ್ ಪಟೇಲ್ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ, ಮೊಹಮ್ಮದ್ ಕಲೀಲ್ ಮಹಿಳಾ ಪ್ರಧಾನ ಕಾರ್ಯದರ್ಶಿ, ಅಸ್ಮ ಖಾನಂ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಮಧು ಕೆ ಎಸ್ ರಾಯಚೂರು ಜಿಲ್ಲಾಧ್ಯಕ್ಷ, ಏಸುಮಿತ್ರ ಸೇರಿದಂತೆ ಇದ್ದರು.
