ಅಥಣಿ: ಬಿಡಿಸಿಸಿ ಬ್ಯಾಂಕ್ ನೌಕರನ ಮೇಲೆ ಹಲ್ಲೆ ನಡೆದಿರುವ ಆರೋಪಕ್ಕೆ ಸಂಬಂಧಿಸಿ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ನಾಲ್ವರು ಸೇರಿ ಶಾಸಕರ ಮನೆಗೆ ತೆರಳಿದ ವೇಳೆ, ಶಾಸಕ ಲಕ್ಷ್ಮಣ ಸವದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ.
ಇದಲ್ಲದೆ, ಶಾಸಕನ ಪುತ್ರ ಚಿದಾನಂದ ಸವದಿ ಸೊಂಟಕ್ಕೆ ಒದ್ದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಂತರ ಶಾಸಕರ ಬೆಂಬಲಿಗರು ಸೇರಿಕೊಂಡು ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ನಿಂಗರಾಜ ಕರೆಣ್ಣವರ ಆರೋಪಿಸಿದ್ದಾರೆ.
ಈ ಸಂಬಂಧ ಅಥಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ವರದಿ : ಭರತೇಶ್ ನಿಡೋಣಿ
