ಯಮಕನಮರಡಿ : ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಜಿ.ಪಂ. ಮಾಜಿ ಸದಸ್ಯರಾದ ಶ್ರೀ ಅರುಣ ಕಟಾಂಬಳೆ, ಪಿಕೆಪಿಎಸ್ ಅಧ್ಯಕ್ಷರಾದ ಶ್ರೀ ಗಜಾನನ ಕಾಗಣಿಕರ್, ಸಚಿವರ ಆಪ್ತರಾದ ಶ್ರೀ ಮಲಗೌಡ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಾಗರ ಪಾಟೀಲ್, ಸಾಗರ ಪಿಂಗಟ್, ಉಪಾಧ್ಯಕ್ಷರಾದ ಶ್ರೀಮತಿ ದೀಪಾ ಬರಗಾಳೆ, ಶ್ರೀ ರಾಜು ಮಾಯಣ್ಣ ಹಾಗೂ ಸಂಘದ ಸರ್ವ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಇದೇ ವೇಳೆ ಬೆಳಗಾವಿ ಡಿಸಿಸಿ ಬ್ಯಾಂಕಿನ ವಿವಿಧ ಯೋಜನೆಗಳ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು.
ಗ್ರಾಮೀಣ ಆರ್ಥಿಕತೆ ಬಲವರ್ಧನೆ, ರೈತರ ಸಬಲೀಕರಣ ಮತ್ತು ಸಹಕಾರಿಯ ಬೆಳವಣಿಗೆಗೆ ಈ ನೂತನ ಕಟ್ಟಡ ಮಹತ್ವದ ಸಹಕಾರ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
