ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಗ್ರಾಮಗಳಲ್ಲಿ ಕಾಮಗಾರಿಗಳ ಗುದ್ದಲಿ ಪೋಜೆ

ಯಮಕನಮರಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ

1)ಗುಟಗುದ್ದಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಇಂದು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಸಾನ್ನಿಧ್ಯದಲ್ಲಿ ನೆರವೇರಿಸಿದರು.

2)ಯಮಕನಮರಡಿ ವಿಧಾನಸಭಾ ಕ್ಷೇತ್ರದ ಬಸ್ಸಾಪೂರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಇಂದು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಜೊತೆಗೆ ನೆರವೇರಿಸಿದರು.

3) ಬಸ್ಸಾಪೂರ ಗ್ರಾಮದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ದೃಢ ಸಂಕಲ್ಪದೊಂದಿಗೆ, ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ವಿಶೇಷ ಆಸಕ್ತಿ ಹಾಗೂ ಕಾಳಜಿಯ ಫಲವಾಗಿ ಅಂದಾಜು ರೂ. 3.00 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾದರಿ ಸರ್ಕಾರಿ ಪ್ರೌಢಶಾಲೆಯ ಕಾಮಗಾರಿಗಳ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

4) ಕರಗುಪ್ಪಿ (ಯಲ್ಲಾಪುರ) ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ಆವರಣದಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನಕ್ಕೆ ಹಾಗೂ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರೂ. 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳ ಜೊತೆಗೆ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಪದಾಧಿಕಾರಿಗಳು ಕಾರ್ಯಕರ್ತರು ಮುಖಂಡರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!