ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಖಾಸಗಿ ಹೋಟೆಲ್ ಒಂದರಲ್ಲಿ ಆಯೋಜಿಸಿದ್ದ, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಉಳಿಸಲು ಆಗ್ರಹಿಸಿ ನಡೆಸುವ ಆಂದೋಲನ ಕುರಿತು ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಪಾಲ್ಗೊಂಡು, ಕೇಂದ್ರ ಸರ್ಕಾರ ಎಂ.ಜಿ. ನರೇಗಾ ಯೋಜನೆಯ ಹೆಸರನ್ನು ಮಾತ್ರವಲ್ಲದೆ, ಅದರ ಮೂಲ ಉದ್ದೇಶವನ್ನೇ ದುರ್ಬಲಗೊಳಿಸುವ ಮೂಲಕ ಗ್ರಾಮೀಣ ಜನತೆಯ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ವಿಚಾರವನ್ನು ವಿವರವಾಗಿ ತಿಳಿಸಿದೆ. ಈ ಹಿನ್ನೆಲೆ, ಯೋಜನೆಯನ್ನು ರಕ್ಷಿಸಲು ಜನಾಂದೋಲನ ರೂಪಿಸುವ ಅಗತ್ಯತೆ ಕುರಿತು ಸವಿಸ್ತಾರವಾಗಿ ಪ್ರಸ್ತಾಪಿಸಲಾಯಿತು.
ಇಂದಿನ ಸಭೆಯಲ್ಲಿ ಶಾಸಕರಾದ ಶ್ರೀ ವಿಠ್ಠಲ ಕಟಕದೋಂಢ, ಡಿಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಲೋಣಿ, ಮುಖಂಡರಾದ ಶ್ರೀ ಅಬ್ದುಲ್ ಹಮೀದ್ ಮುಶ್ರೀಫ್, ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಅಜೀಜ ಪಠಾಣ.
