ಚೋರ್ಲಾ ಘಾಟ್ ಅಪಹರಣಕ್ಕೆ ಸಂದೀಪ ಪಾಟೀಲರಿಂದ ಮತ್ತೊಂದು ಟ್ವಿಸ್ಟ್

ಬೆಳಗಾವಿ : ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಎಂದೇ ಹೇಳಲಾಗುತ್ತಿರುವ ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ ನಡೆದ 400 ಕೋಟಿ ರೂ ಹಣವಿದ್ದ 2 ಕಂಟೇನರ್​ಗಳು ನಾಪತ್ತೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿಯಲ್ಲಿ ಚೋರ್ಲಾ ಘಾಟ್ ನಲ್ಲಿ ನಡೆದಿದ್ದು 400 ಕೋಟಿಯಲ್ಲ ಬರೋಬ್ಬರಿ 1000 ಕೋಟಿ ದರೋಡೆ ಎಂದು ಹೇಳಲಾಗುತ್ತಿದೆ.
ಕಂಟೇನರ್ ‌ರಾಬರಿ ಆದ ಬಳಿಕ ಮಹಾರಾಷ್ಟ್ರ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಸಹಚರರು ಸಂದೀಪ್ ಪಾಟೀಲ್​​ಗೆ ಗನ್ ಪಾಯಿಂಟ್ ತೋರಿಸಿ ಅಪಹರಿಸಿದ್ದರು. ಒಂದೂವರೆ ತಿಂಗಳು ಒತ್ತೆಯಾಳಾಗಿಸಿಕೊಂಡು ಚಿತ್ರಹಿಂಸೆ ನೀಡಿದ್ದಾರೆ. ಕಂಟೇನರ್ ಹೈಜಾಕ್‌ಗೆ ನೀನೇ ಕಾರಣ ಎಂದು ಸಂದೀಪ್‌ಗೆ ಚಿತ್ರಹಿಂಸೆ ನೀಡಿದ್ದಾರೆ.
ಚೋರ್ಲಾ ಘಾಟ್ ನಲ್ಲಿ ದರೋಡೆಯಾಗಿದ್ದು 1000 ಕೋಟಿ ರೂಪಾಯಿ. ಅದರಲ್ಲಿ ಬ್ಯಾನ್ ಆಗಿದ್ದ 2000 ರೂ ಮುಖ ಬೆಲೆಯ ನೋಟುಗಳು ಇದ್ದವು. ರದ್ದಾಗಿದ್ದ ನೋಟ್ಗಳನ್ನು ಕಂಟೇನರ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ದರೋಡೆ ನಡೆದಿದೆ ಎಂದು ದೂರುದಾರ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಇದು ದೇಶದ ಅಪರಾಧದ ಇತಿಹಾಸದಲ್ಲೇ ಬೆಚ್ಚಿಬೀಳಿಸುವ ಅತಿದೊಡ್ಡ ದರೋಡೆ ಪ್ರಕರಣ ಎನ್ನಲಾಗುತ್ತಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ. 2025 ಅಕ್ಟೋಬರ್ 16ರಂದು ಈ ಘಟನೆ ನಡೆದಿದೆ. ನನ್ನನ್ನು ಒಂದು ತಿಂಗಳ ಕಾಲ ಕೂಡಿಟ್ಟು ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಇಬ್ಬರು ಪೊಲೀಸರು ನನಗೆ ಜೀವ ಬೆದರಿಕೆ ಹಾಕಿದ್ದು, ರಕ್ಷಣೆ ನೀಡುವಂತೆ ಸಂದೀಪ್ ಪಾಟೀಲ್ ವಿಡಿಯೋ ಹೇಳಿಕೆ ನೀಡಿದ್ದಾರೆ.

ದೂರುದಾರ ಸಂದೀಪ್ ಪಾಟೀಲ್ ಹೇಳಿಕೆ ಬಗ್ಗೆಯೂ ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದ್ದು, ಚೋರ್ಲಾಘಾಟ್ ನಲ್ಲಿ ನಡೆದ ದರೋಡೆ ಕೇಸ್ ನಲ್ಲಿ ನಿಜಕ್ಕೂ ಆಗಿರುವ ದರೋಡೆ ಹಣವೆಷ್ಟು ಎಂಬುದು ತನಿಖೆ ಬಳಿಕವೇ ಬಯಲಾಗಬೇಕಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸರಿಗೆಈ ಪ್ರಕರಣ ದೊಡ್ಡ ಸವಾಲಾಗಿದೆ. ಸದ್ಯ ನಾಸಿಕ್​ ಪೊಲೀಸರು ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ.
.

error: Content is protected !!