ಘಟಪ್ರಭಾ ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಕೂಡಲಸಂಗಮದ ಮಾದರಿಯಲ್ಲಿ ಗೋಕಾಕ ನಗರದಲ್ಲಿ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳು ಸಂಗಮಿಸುವ ಪವಿತ್ರ ಸ್ಥಳವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಮಹತ್ವದ ಯೋಜನೆಯ ಕುರಿತು ಇಂದು ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರವಾಸೋದ್ಯಮ ಹಾಗೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಈ ಸಂಗಮ ಕ್ಷೇತ್ರವನ್ನು ಸುಂದರ ತೀರ್ಥಕ್ಷೇತ್ರವಾಗಿ ರೂಪಿಸುವ ಅಗತ್ಯತೆ ಕುರಿತು ಚರ್ಚೆ ನಡೆಯಿತು. ನದೀ ತೀರದ ಸೌಂದರ್ಯವರ್ಧನೆ, ಸಾರ್ವಜನಿಕರಿಗೆ ಅನುಕೂಲವಾಗುವ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಅಶೋಕ ಪೂಜಾರಿ, ರಾಜು ಮುನವಳ್ಳಿ, ಬಸವರಾಜ ಕಲ್ಯಾಣಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
