ಔರಾದ್: ತಾಲೂಕಿನ ತೇಗಂಪುರ ಗ್ರಾಮದಲ್ಲಿ ಶ್ರೀ ರೇವಪ್ಪಯ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆಬ್ರವರಿ 7ರಂದು ಶನಿವಾರ ಮುಂಜಾನೆ 10.30 ಗಂಟೆಗೆ
ವಿ ಕೇರ್ ಆಸ್ಪತ್ರೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸಕ್ತ ವರ್ಷ ಗ್ರಾಮದಲ್ಲಿ ಐದನೇ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಬಡ ಜನರ ಆರೋಗ್ಯದ ಹಿತದೃಷ್ಟಿಯಿಂದ ವಿ ಕೇರ್ ಆಸ್ಪತ್ರೆಯ ಮುಖ್ಯಸ್ಥರಾದ ವಿದ್ಯಾಸಾಗರ ಅವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ಸದುಪಯೋಗವನ್ನು ಈ ಭಾಗದ ಜನರು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
