ಯಮಕಮರಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಯಮಕಮರಡಿ ವಿಧಾನಸಭಾ ಕ್ಷೇತ್ರದ ಕುರಣಿ ಗ್ರಾಮದಲ್ಲಿ ಅಂದಾಜು ರೂ. 20.00 ಲಕ್ಷ ವೆಚ್ಚದಲ್ಲಿ ನೂತನ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಿದರು.
ಈ ವೇಳೆ ಯುವ ಅಹಿಂದ ಸಂಘಟನೆ ಸೇವಾ ಕೇಂದ್ರಕ್ಕೆ ಭೇಟಿ ನೀಡಿ, ಬಡವರಿಗೆ ಸರ್ಕಾರಿ ಸೇವೆಗಳನ್ನು ಉಚಿತವಾಗಿ ನೀಡುತ್ತಿರುವ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ನಂತರ ಶ್ರೀ ಗಂಗಾದೇವಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ ಪಕ್ಷದ ಕಾರ್ಯಕರ್ತರು ಜಾರಕಿಹೊಳಿ ಅಭಿಮಾನಿ ಬಳಗದವರಿಗೆ ಗ್ರಾಮದ ಯುವಕರು ಹಿರಿಯರು ಹಾಗೂ ಮುಖಂಡರು ಮತ್ತೀತರು ಉಪಸ್ಥಿತರಿದ್ದರು.
