ಹುಕ್ಕೇರಿ ತಾಲೂಕು ಸಬ್ ರಿಜಿಸ್ಟ್ರಾರ್ ಪೊಲೀಸ ಅವರ ಅತಿಥಿ

ಹುಕ್ಕೇರಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ–ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ತಾಲೂಕು ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಗೆ ನಿರಪೇಕ್ಷಣಾ ಜಾಮೀನು ಮಂಜೂರಾಗಿದ್ದ ಹಿನ್ನೆಲೆಯಲ್ಲಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಅವರು ಠಾಣೆಗೆ ಆಗಮಿಸಿದ್ದರು. ಆದರೆ ಅದೇ ವೇಳೆ, ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಹೊಸ ಪ್ರಕರಣದ ಆಧಾರದ ಮೇಲೆ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ಮಾರಾಟ ಮಾಡಲಾಗಿದೆ ಎಂಬ ಆರೋಪ ಇವರ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದ ನಂತರ ಕಳೆದ 16 ದಿನಗಳಿಂದ ಇಬ್ಬರೂ ತಲೆಮರೆಸಿಕೊಂಡಿದ್ದರು.

ಜಾಮೀನು ಸಿಕ್ಕ ಖುಷಿಯಲ್ಲಿ ನಿರಾಳರಾಗುವ ನಿರೀಕ್ಷೆಯಲ್ಲಿದ್ದ ಆರೋಪಿಗಳು, ಜಾಮೀನು ಕಾಗದಗಳನ್ನು ತೋರಿಸಿದ ಕ್ಷಣದಲ್ಲೇ ಬಂಧನಕ್ಕೊಳಗಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ. ಪ್ರಕರಣವು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

error: Content is protected !!