ರಸ್ತೆ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಯಮಕನಮರಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಜ್ಜೆಯಾಗಿ ಹಲವಾರು ರಸ್ತೆ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಆಯಾ ಗ್ರಾಮದ ಹಿರಿಯರು ‌ಮತ್ತು ಮುಖಂಡರ ಜೊತೆಗೆ ಚಾಲನೆ ನೀಡಿದರು.

ಕ್ಷೇತ್ರದ ದಡ್ಡಿ – ಗುದನಟ್ಟಿ ಗ್ರಾಮಗಳ ನಡುವಿನ 40 ಲಕ್ಷ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಮತ್ತು ಗುದನಟ್ಟಿ ಗ್ರಾಮದಲ್ಲಿ ವಿವಿಧ ಸಿಸಿ ರಸ್ತೆಗಳ ನಿರ್ಮಾಣಕ್ಕಾಗಿ 40 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೂ ಚಾಲನೆ ನೀಡಿದರು.

ಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದಿಂದ – ಭಾವೇಶ್ವರಿ ದೇವಸ್ಥಾನದವರೆಗೆ 30 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ‌ ನೀಡಲಾಯಿತು. ಈ ರಸ್ತೆಯ ಅಭಿವೃದ್ಧಿಯಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳಿಗೆ ಉತ್ತಮ ಸಂಪರ್ಕ ಸೌಲಭ್ಯ ದೊರಕಲಿದೆ
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಊರಿನ ಗಣ್ಯಮಾನ್ಯರು ಯುವಕರು ಮತ್ತಿತರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಮ್

error: Content is protected !!