ನಿಪ್ಪಾಣಿ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದಲ್ಲಿ ಸಂಸದರ ಅನುದಾನದಲ್ಲಿ ಮಂಜೂರಾದ ದತ್ತ ದೇವಸ್ಥಾನ ಸಮುದಾಯ ಭವನ ಕಟ್ಟಡದ ಭೂಮಿ ಪೂಜೆಯನ್ನು ಇಂದು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
₹10 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಸಮುದಾಯ ಭವನವು ಗ್ರಾಮಸ್ಥರ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಸಹಕಾರಿಯಾಗಲಿದೆ.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ : ಸದಾನಂದ ಎಮ್
