ದ್ವೇಷ ಭಾಷಣ ವಿವಾದಾತ್ಮಕ ಹೇಳಿಕೆ ಶಾಸಕ ಯತ್ನಾಳ ವಿರುದ್ಧ ಪ್ರಕರಣ ದಾಖಲು

ಯಾದಗಿರಿ: ಪಟ್ಟಣದಲ್ಲಿ ಶನಿವಾರ (ಫೆ.21)
ನಡೆದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭಾಷಣ ಮಾಡುತ್ತಿದ್ದ ವೇಳೆ ಮುಸ್ಲಿಂ ಸಮುದಾಯ, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರೂ, ಟಿಪ್ಪು ಸುಲ್ತಾನ, ಔರಂಗಜೇಬ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೋಮಿನ ಕುರಿತು ಮಾಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಒಂದು ಕೋಮಿನ ಭಾಷೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ನೀಡಲಾದ ದೂರಿನ ಆಧಾರದಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196, 299, 302, 352 ಹಾಗೂ 353 ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸ್ ಇಲಾಖೆ ಮಾಹಿತಿ ನೀಡಿದರು.

error: Content is protected !!