ಹುಕ್ಕೇರಿ ತಾಲೂಕಿನ ಆರೋಗ್ಯ ಸೇವೆಗಳ ಸ್ಥಿತಿ, ಕುಡಿಯುವ ನೀರಿನ ಸಮರ್ಪಕ ಸರಬರಾಜು, ರೇಷನ್ ಕಾರ್ಡ್ ಸಮಸ್ಯೆಗಳ ಪರಿಹಾರ, ರಸ್ತೆ ಕಾಮಗಾರಿಗಳ ಪ್ರಗತಿ ಸೇರಿದಂತೆ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಅಗತ್ಯ ಸೂಚನೆಗಳನ್ನು ನೀಡಲಾಯಿತು.
ಬೇಸಿಗೆ ಹಿನ್ನಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಮಾಡುವುದು, ಯಾವುದೇ ಗ್ರಾಮದಲ್ಲೂ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದು ಹಾಗೂ ದನಕರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಸಂದರ್ಭದಲ್ಲಿ ಹುಕ್ಕೇರಿ ತಾಲೂಕಿನ ಯಮಕಮರಡಿ ಕ್ಷೇತ್ರದಲ್ಲಿ 107 ಸರ್ಕಾರಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲವು ಕಾಮಗಾರಿಗಳು ಅಂತಿಮ ಹಂತದಲ್ಲಿವೆ ಎಂಬ ಮಾಹಿತಿ ನೀಡಲಾಯಿತು. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿಯ ದಾರಿಯಲ್ಲಿ ಹುಕ್ಕೇರಿ ತಾಲೂಕನ್ನು ಇನ್ನಷ್ಟು ಮುನ್ನಡೆಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ವರದಿ : ಸದಾನಂದ ಎಮ್.
