ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಿಪ್ಪಾಣಿ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕುಣ್ಣೂರ ಗ್ರಾಮದಲ್ಲಿ ಅಂದಾಜು 20 ಲಕ್ಷ ರೂ.,

ಬೆನ್ನಾಡಿ ಗ್ರಾಮದಲ್ಲಿ 25 ಲಕ್ಷ ರೂ.,

ಭಿವಶಿ ಮತ್ತು ಹುನ್ನರಗಿ ಗ್ರಾಮಗಳಲ್ಲಿ ತಲಾ 20 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಿಪ್ಪಾಣಿ ತಾಲೂಕಿನ ಶಿರಗುಪ್ಪಿ, ಹದನಾಳ, ಸುಳಗಾಂವ್ ಹಾಗೂ ಕೊಗನೊಳ್ಳಿ ಗ್ರಾಮಗಳಲ್ಲಿ ತಲಾ ₹20 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು. ಒಟ್ಟು ಸುಮಾರು ₹80 ಲಕ್ಷ ವೆಚ್ಚದ ಈ ಅಭಿವೃದ್ಧಿ ಕಾಮಗಾರಿಗಳು ಗ್ರಾಮಗಳ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿವೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಿಪ್ಪಾಣಿ ತಾಲೂಕಿನ ತವಂದಿ ಗ್ರಾಮದಲ್ಲಿ ಇಂದು ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದೆನು.
ಈ ಸಂದರ್ಭದಲ್ಲಿ ಅಂದಾಜು 20 ಲಕ್ಷ ರೂ. ವೆಚ್ಚದಲ್ಲಿ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ ಮುಖಂಡರಾದ ಕಿರಣ್ ರಜಪೂತ್ ನಿಪ್ಪಾಣಿ ಮತಕ್ಷೇತ್ರದ ಜನಪ್ರತಿನಿಧಿಗಳು ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಮ್

error: Content is protected !!