ಆದ್ಯ ವಚನಕಾರರಾದ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಆಚರಣೆ

ಕಲ್ಬುರ್ಗಿ : ಜಿಲ್ಲೆಯ ಕಾಳಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಡಹಳ್ಳಿಯಲ್ಲಿ 11ನೇ ಶತಮಾನದ ಆದ್ಯ ವಚನಕಾರರಾದ ಶ್ರೀ ದೇವರ ದಾಸಿಮಯ್ಯನವರ ಜಯಂತಿಯನ್ನು ಅದ್ದೂರಿಯಾಗಿ ಭಕ್ತಿ ಭಾವದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿಲ್ಲಿ ಶ್ರೀ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ವಿಶೇಷವಾಗಿ ಶ್ರೀ ಶ್ರೀಮಂತ ಕೆ ಗಂಜಿ ಮುಖ್ಯ ಗುರುಗಳು ರವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಮರ್ಪಣೆ ಸಲ್ಲಿಸಿದರು.
ವಚನಗಳನ್ನು ಆಲಿಸುವುದರಿಂದ ಜೀವನದಲ್ಲಿ ಬೆಳಕನ್ನು ಚೆಲ್ಲುತ್ತದೆ. ವಚನಗಳ ಪಟ್ಟಣದಿಂದ ಸರಿಯಾದ ದಾರಿಯಲ್ಲಿ ನಡೆಯುವ ಮೂಲಕ ನಮ್ಮಜೀವನವನ್ನು ಸಾರ್ಥಕ ಮಾಡಿಕೊಳ್ಳಲಾಗುತದೆ .ಶರಣರ ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ವಚನ ಸಾಹಿತ್ಯಕ್ಕೆ ಭದ್ರ ಅಡಿಪಾಯವನ್ನು ಹಾಕಿದ ದಾಸಿಮಯ್ಯನವರ ರಾಮನಾಥ ಅಂಕಿತನಾಮದ ವಚನಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಎಂದು ಶ್ರೀಮಂತ್ ಕೆ ಗಂಜಿ ಮುಖ್ಯ ಗುರುಗಳು ಸರ್ಕಾರಿ ಹಿ ಪ್ರಾ ಶಾ ಕುಡ್ದಹಳ್ಳಿ ಈ ಸಂದರ್ಭದಲ್ಲಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಶ್ರೀಮಂತ್ ಕೆ ಗಂಜಿ ಮುಖ್ಯ ಗುರುಗಳು ಸ. ಹಿ. ಪ್ರಾ. ಶಾ. ಕುಡ್ಹಳ್ಳಿ, ಪ್ರಭಾಕರ್ ಸರ, ರಮೇಶ್ ದೇವನಕರ್ ಎಸ್ ಡಿ ಎಂ ಸಿ ಅಧ್ಯಕ್ಷರು, ಗಿರಿದರಾವ್ ರಜಪೂತ , ಶ್ರೀಮತಿ ಭವಾನಿ ಶಂಕರ್ ಎಸ್‌ಡಿಎಂಸಿಯ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಮತ್ತು ಪಾಲಕರು ಮತ್ತು ಮುದ್ದು ಮಕ್ಕಳು ಉಪಸ್ಥಿತರಿದ್ದರು.
ವರದಿ ರಮೇಶ್ ಎಸ್ ಕುಡಹಳ್ಳಿ jk ಕನ್ನಡ ನ್ಯೂಸ್ ಕಾಳಗಿ

error: Content is protected !!