ಲೈಂಗಿಕ ಹಿಂಸೆಯ ಸಮಸ್ಯೆಗಳು ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ FIRE ಸಂಸ್ಥೆಯು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದೆ.
ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಮಲಯಾಳಂ ಚಲನ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಹಿಂಸೆ ಮತ್ತು ಇತರೆ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಂತರ, ಕರ್ನಾಟಕ ಸರ್ಕಾರವು ಕನ್ನಡ ಚಲನಚಿತ್ರೋದ್ಯಮದಲ್ಲಿನ ಈ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಫೈರ್ ಸಂಸ್ಥೆಯು(ಫಿಲ್ಡ್ ಇಂಡಸ್ಟ್ರಿ ಫಾರ್ ರೈಟ್ಸ್ ಆಂಡ್ ಇಕ್ಯಾಲಿಟಿ) ಆಗ್ರಹಿಸಿದೆ.
ದೂರುಗಳ ಸಮಿತಿಯನ್ನು (ICC) ಸ್ಥಾಪಿಸುವಲ್ಲಿ FIRE ಸಂಸ್ಥೆಯು ಪ್ರಮುಖ ಪಾತ್ರ ವಹಿಸಿದೆ. ಹಾಗೆಯೇ, ಲೈಂಗಿಕ ಕಿರುಕುಳದ ಸಂತ್ರಸ್ತರನ್ನು (2017 ರಿಂದ ಈ ವರೆಗೂ) ಸಂಸ್ಥೆ ಬೆಂಬಲಿಸುತ್ತಲೇ ಬಂದಿದೆ.
ಸಧ್ಯ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸುರಕ್ಷಿತವಾದ ಕೆಲಸದ ವಾತಾವರಣವನ್ನು ನೀಡುವುದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯವಾದ ಅಂಶವೆಂದರು,
ಈ ಹಿನ್ನಲೆಯಲ್ಲಿ, ಈ ಕೆಳಕಂಡ ಅಂಶಗಳನ್ನು ಪರಿಶೀಲಿಸುವುದಕ್ಕಾಗಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ FIRE ಕರ್ನಾಟಕ ಸರ್ಕಾರವನ್ನು ವಿನಂತಿಸಿದೆ
1. ಲೈಂಗಿಕ ಕಿರುಕುಳ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ (ಕೆಎಫ್ಐ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ತನಿಖೆ ಮಾಡುವುದು.
2. ಚಿತ್ರೋದ್ಯಮದಲ್ಲಿ ಎಲ್ಲಾ ಮಹಿಳೆಯರಿಗೂ ಸುರಕ್ಷಿತವಾದ ನ್ಯಾಯಯುತವಾದ ವಾತಾವರಣವನ್ನು ಸೃಷ್ಟಿಸಲು ಅದಕ್ಕೆ ತಕ್ಕ ಪಾಲಿಸಿ ರಚಿಸುವುದು.
ಇದಕ್ಕೆ ಸಹಕಾರ ನೀಡಲು ಫೈರ್ ಸಂಸ್ಥೆ ಸಿದ್ದವಾಗಿದೆ ಎಂದು ಅವರು ತಿಳಿಸದ್ದಾರೆ.