ಚಿಂಚೋಳಿ ತಾಲೂಕಿನ ಮಿರಿಯಾಣ ವ್ಯಾಪ್ತಿಯ ಹೂವಿನತೋಟ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವರ 79ನೇ ಜಾತ್ರಾ ಮಹೋತ್ಸವವನ್ನು ಭಕ್ತಿ ಭಾವದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಪ್ರತಿ ವರ್ಷ ಭಕ್ತರ ಅಪಾರ ಉಪಸ್ಥಿತಿಯಲ್ಲಿ ನಡೆಯುವ ಜಾತ್ರೆ ಈ ವರ್ಷವೂ ಅದ್ದೂರಿಯಾಗಿ ನಡೆಯಲಿದ್ದು,
ಕಾರ್ಯಕ್ರಮದ ಅಂಗವಾಗಿ ಮಾರ್ಚ್ 30, 2026ರಂದು ರಾತ್ರಿ 8 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಪಲ್ಲಕಿ ಮಹೋತ್ಸವ ನಡೆಯಲಿದೆ.
ಗ್ರಾಮಸ್ಥರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆಯಲಿದ್ದಾರೆ.
ಏಪ್ರಿಲ್ 1,ರಂದು ಬೆಳಿಗ್ಗೆ 7 ಗಂಟೆಗೆ ಅಗ್ನಿ ಪ್ರವೇಶ ಕಾರ್ಯಕ್ರಮ ನಡೆಯಲಿದ್ದು, ಇದು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದೆ, ಅದೇ ದಿನ ಸಂಜೆ 4 ಗಂಟೆಗೆ ರಥೋತ್ಸವ ಕಾರ್ಯಕ್ರಮ ಜರುಗಲಿದ್ದು, ದೇವರ ರಥವನ್ನು ಭಕ್ತರು ಭಕ್ತಿಭಾವದಿಂದ ಎಳೆಯಲಿದ್ದಾರೆ.
ಸಂಜೆ 5 ಗಂಟೆಗೆ ಕೈ ಕುಸ್ತಿ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಗ್ರಾಮಸ್ಥರು ಹಾಗೂ ದೇವಸ್ಥಾನ ಸಮಿತಿಯ ಪಂಚಕ್ಷರಿ ಸ್ವಾಮಿ, ಮತ್ತು ಸಿದ್ದಯ್ಯ ಗೌಡ.ಹಾಗೂ ಸಮಸ್ಥ ಗ್ರಾಮಸ್ಥರ ವತಿಯಿಂದ ಜಾತ್ರೆಯ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ಮನವಿಯನ್ನ ಮಾಡಿದ್ದಾರೆ.
ವರದಿ : ರಾಜೇಂದ್ರ ಪ್ರಸಾದ್
