ಸಂಕೇಶ್ವರ : ಎಸ್‌ಡಿವಿಎಸ್ ಸಂಘದ ಅನ್ನಪೂರ್ಣ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ “ಇಲುಮಿನೇಶನ್” (ಲೈಟ್ ಲ್ಯಾಂಪ)ಸಮಾರಂಭವು ಭಾವಪೂರ್ಣವಾಗಿ ಹಾಗೂ ಅದ್ದೂರಿಯಾಗಿ ನೆರವೇರಿತು
ಈ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವರಾದ ಶ್ರೀ ಎ. ಬಿ. ಪಾಟೀಲವರು ವಹಿಸಿದ್ದು, ನಿಡಸೋಸಿ ಮಠದ ಪೂಜ್ಯ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿಗಳು ಆಶೀರ್ವಚನ ನೀಡಿ ವಿದ್ಯಾರ್ಥಿಗಳಿಗೆ ಸದುಪದೇಶಗಳನ್ನು ನೀಡಿದರು
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾ. ನಾಮದೇವ ಮಾಳಗಿ ಹಾಗೂ ಡಾ. ಶರಣು ಗಡೇದ ಅವರು ಭಾಗವಹಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶುಭಾಶಯಗಳನ್ನು ಕೋರಿದರು
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರು, ಕಾರ್ಯದರ್ಶಿಗಳು, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರಗು ನೀಡಿದರು
ಇದೇ ವೇಳೆ ವಾರ್ಷಿಕ ಕ್ರೀಡಾಕೂಟ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು
ಭಾವನಾತ್ಮಕ ಕ್ಷಣಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಸಿಹಿ ನೆನಪುಗಳನ್ನು ಹಂಚಿಕೊಂಡು, ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
