ಕಾಗವಾಡದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ: ಇಬ್ಬರಿಗೆ ಗಡಿಪಾರು ಶಿಕ್ಷೆ

ಕಾಗವಾಡ: ಕಾಗವಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ಇಬ್ಬರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು ಇಬ್ಬರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಮನೋಜ್ ರುದ್ರಪ್ಪ ಕಾಂಬಳೆ ಮತ್ತು ಉಗಾರ ಖುರ್ದ ಗ್ರಾಮದ ಶಬ್ಬೀರ್ ಬಾದಶಾ ಪಠಾಣ್ ಗಡಿಪಾರು ಮಾಡಿದ ವ್ಯಕ್ತಿಗಳಾಗಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55 ಮತ್ತು 56(f) ಅನ್ವಯ ಮೂರು ತಿಂಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿದ್ದಾರೆ.

ಮನೋಜ್ ರುದ್ರಪ್ಪ ಕಾಂಬಳೆ ಅವರನ್ನು ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಗೆ ಹಾಗೂ ಶಬ್ಬೀರ್ ಬಾದಶಾ ಪಠಾಣ್ ಅವರನ್ನು ಗಾಂಧಿ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಗೆ ನಿಯೋಜಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕರಲ್ಲಿ ಭದ್ರತೆ ಮತ್ತು ಶಾಂತಿ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಸಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವರದಿ : ಭಾರತೇಶ್ ನಿಡೋಣಿ

error: Content is protected !!