ಸುಲೇಪೇಟ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ನೀರಿನ ಪರದಾಟ

ಚಿಂಚೋಳಿ ತಾಲೂಕಿನ ಸುಲೇಪೇಟ ಬಸ್ ನಿಲ್ದಾಣದಲ್ಲಿ ನಿತ್ಯ ಪ್ರಯಾಣಿಕರು ನೀರಿಗಾಗಿ ಹಾಗೂ ಬಿಸಿಲಿನ ತಾಪವನ್ನು ಸಹಿಸಿಕೊಳ್ಳಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಫ್ಯಾನಿನ ವ್ಯವಸ್ಥೆಯು ಕೂಡ ಇಲ್ಲ
ನಿತ್ಯ ಬಸ್ ನಿಲ್ದಾಣದಿಂದ ಸಾವಿರಾರು ಸಂಖ್ಯೇಯ ಪ್ರಯಾಣಿಕರು ಸಂಚರಿಸುತ್ತಾರೆ, ಆದರೆ ವಿಪರ್ಯಾಸವೇನೆಂದರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಪ್ರಯಾಣಿಕರ ಅನುಕೂಲತೆಗಾಗಿ ಯಾವುದೇ ಕೂಡ ಸರಿಯಾದ ವ್ಯವಸ್ಥೆ ಮಾಡಿಲ್ಲ ಈಗಾಗಲೇ ವಿಪರೀತ ಬೇಸಿಗೆ ಇದ್ದು ಪ್ರಯಾಣಿಕರು ಶುದ್ಧ ಕುಡಿಯುವ ನೀರಿನ ಮೊರೆ ಹೋದರೆ ಅಲ್ಲಿ ಯಾವುದೇ ನೀರಿನ ವ್ಯವಸ್ಥೆ ಇಲ್ಲ! ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಪ್ರಯಾಣಿಕರು ಕಡು ಬಡವರಾಗಿರುತ್ತಾರೆ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಇದ್ದು ಅವರಿಗೆ ದುಡ್ಡು ಕೊಟ್ಟು ನೀರಿನ ಬಾಟಲ್ ಖರೀದಿ ಮಾಡಲು ತೊಂದರೆಯಾಗುತ್ತದೆ.
ಅದರಂತೆ ಬಿಸಿಲಿನ ತಾಪ ಸಹಿಸಿಕೊಳ್ಳಲು ಬಸ್ ನಿಲ್ದಾಣದ ಒಳಗಡೆ ಯಾವುದೇ ಪ್ಯಾನಿನ ವ್ಯವಸ್ಥೆ ಕೂಡ ಇಲ್ಲ, ಕೂಡಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು
ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಫ್ಯಾನಿನ ವ್ಯವಸ್ಥೆ ಪ್ರಯಾಣಿಕರಿಗೆ ಅನುಕೂಲ ಮಾಡಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸಮಾಜ ಸೇವಕರಾದ ಹಾಗೂ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಗೈಬಣ್ಣ ತಿಳಿಸಿದ್ದಾರೆ.

ವರದಿ : ರಾಜೇಂದ್ರ ಪ್ರಸಾದ್

error: Content is protected !!