ಮಿಸ್ ಸ್ಟೇಟ್ ಕಿರೀಟ ಗೆದ್ದ ಮಾಡೆಲ್ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬ್ಯಾಗ್ ನೋಡಿ ಪೊಲೀಸ್ ದಂಗು

ಮುಂಬೈ: ಬ್ಯಾಂಕಾಕ್‌ನಿಂದ ಮುಂಬೈಗೆ ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಖ್ಯಾತ ಮಾಡೆಲ್ ಹರ್ಷಾ ಸನ್ನಿ (29) ಅವರನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು ₹11.82 ಕೋಟಿ ಮೌಲ್ಯದ 11.8 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕಾಕ್‌ನಿಂದ ಏರ್ ಇಂಡಿಯಾ ವಿಮಾನದ ಮೂಲಕ ಮುಂಬೈಗೆ ಆಗಮಿಸಿದ ಹರ್ಷಾ ಸನ್ನಿ ಅವರ ವರ್ತನೆಯ ಮೇಲೆ ಕಸ್ಟಮ್ಸ್‌ ಅಧಿಕಾರಿಗಳಿಗೆ ಅನುಮಾನ ಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆಕೆಯನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಆಕೆಯ ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ವ್ಯಾಕ್ಯೂಮ್-ಸೀಲ್ಡ್ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಮಾದಕ ದ್ರವ್ಯ ಪತ್ತೆ ಹಚ್ಚುವ ಎನ್‌ಡಿಪಿಎಸ್ ಕಿಟ್ ಬಳಸಿ ಪರೀಕ್ಷಿಸಿದಾಗ, ಅದು ಪ್ರೀಮಿಯಂ ಗುಣಮಟ್ಟದ ಹೈಡ್ರೋಪೋನಿಕ್ ಗಾಂಜಾ ಎಂದು ದೃಢಪಟ್ಟಿದೆ.

error: Content is protected !!